Select Your Language

Notifications

webdunia
webdunia
webdunia
webdunia

ಕಾಡಾನೆಯೊಂದಿಗೆ ಹುಚ್ಚಾಟ ನಡೆಸಿದ ತಪ್ಪಿಗೆ ಭಾರೀ ದಂಡ ಕಟ್ಟಿದ ಆರೋಪಿ ಮಾಡಿದ್ದೇನು

Shahul Hameed of Gundlupet

Sampriya

ಚಾಮರಾಜನಗರ , ಸೋಮವಾರ, 10 ಫೆಬ್ರವರಿ 2025 (14:48 IST)
Photo Courtesy X
ಚಾಮರಾಜನಗರ: ರಸ್ತೆಗೆ ಬಂದಿದ್ದ ಕಾಡಾನೆ ಜೊತೆ ಫೋಟೋ ಕ್ಲಿಕ್ಕಿಸಿಕೊಂಡು ಚೆಲ್ಲಾಟ ಆಡಿದ್ದ ಆರೋಪಿಗೆ ಅರಣ್ಯ ಇಲಾಖೆ ₹ 25 ಸಾವಿರ ರೂಪಾಯಿ ದಂಡ ವಿಧಿಸಿದೆ. ಜೊತೆಗೆ ವನ್ಯಜೀವಿಗಳಿಗೆ ತೊಂದರೆ ಕೊಡದಂತೆ ಮುಚ್ಚಳಿಕೆ ಬರೆಸಿಕೊಂಡು ಎಚ್ಚರಿಕೆ ನೀಡಿದೆ.

ಗುಂಡ್ಲುಪೇಟೆಯ ಶಾಹುಲ್ ಹಮೀದ್ ಎಂಬವರು ₹ 25 ಸಾವಿರ ದಂಡ ಕಟ್ಟಿದ್ದಾರೆ. ಆಹಾರ ಅರಸಿ ರಸ್ತೆಗಿಳಿದ ಕಾಡಾನೆ ಮುಂದೆ ಫೋಟೋಗಾಗಿ ಹುಚ್ಚಾಟ ಮೆರೆದಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು.

ಗುಂಡ್ಲುಪೇಟೆ- ಊಟಿ ಹೆದ್ದಾರಿ ಹಾದುಹೋಗುವ ಬಂಡೀಪುರದಲ್ಲಿ ಕಾಡಾನೆ ಮುಂದೆ ಕಿರುಚಾಡಿರುವುದು ವಿಡಿಯೊದಲ್ಲಿ ಸೆರೆಯಾಗಿತ್ತು. ರಸ್ತೆಗೆ ಬಂದ ಕಾಡಾನೆ ಕಂಡು ಫೋಟೋ ತೆಗೆಸಿಕೊಂಡು ಕಿರುಚಾಡಿ ಕೀಟಲೆ ಮಾಡಿದ್ದರು‌. ಕಾಡಾನೆ ಎದುರು ಹುಚ್ಚಾಟ ಮೆರೆದ ಯುವಕನನ್ನು ಬಂಧಿಸಬೇಕೆಂದು ಒತ್ತಾಯವೂ ಕೇಳಿಬಂದಿತ್ತು. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದ್ದಂತೆ ಎಚ್ಚೆತ್ತ ಬಂಡೀಪುರ ಅರಣ್ಯ ಇಲಾಖೆಯು 25 ಸಾವಿರ ರೂ. ದಂಡ ವಿಧಿಸಿ ಬಿಸಿ ಮುಟ್ಟಿಸಿದೆ.

ದಂಡ ಪಾವತಿಸಿದ ಶಾಹುಲ್ ಹಮೀದ್ ವಿಡಿಯೋದಲ್ಲಿ ಮಾತನಾಡಿದ್ದು, ಬಂಡೀಪುರ ರಾಷ್ಟ್ರೀಯ ಉದ್ಯಾನವನದ ವಾಪ್ತಿಯಲ್ಲಿ ಊಟಿಗೆ ಹೋಗುವಾಗ ಆನೆ ನಾನು ಮುಂದೆ ಫೋಟೊ ಹಾಗೂ ವಿಡಿಯೋಗಳನ್ನು ಕ್ಲಿಕ್ಕಿಸಿದ್ದು, ಇದಕ್ಕಾಗಿ ₹ 25 ಸಾವಿರ ದಂಡ ಕಟ್ಟಿದ್ದೇನೆ. ಈ ರಾಷ್ಟ್ರೀಯ ಉದ್ಯಾನವನ ಪರಿಸರದಲ್ಲಿ ಪ್ಲಾಸ್ಟಿಕ್ ಎಸೆಯುವುದು, ವಾಹನ ನಿಲ್ಲಿಸುವುದು​ ಹಾಗೂ ವಿಡಿಯೋ, ಫೋಟೊ ಸೆರೆಹಿಡಿಯುವುದು ತಪ್ಪಾಗಿದೆ. ಹೀಗಾಗಿ, ಅಂತಹ ತಪ್ಪುಗಳನ್ನು ಯಾರೂ ಮಾಡಬಾರದು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ತ್ರಿವೇಣಿ ಸಂಗಮದಲ್ಲಿ ಪವಿತ್ರಸ್ನಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು