ಕಾಡಾನೆಯೊಂದಿಗೆ ಹುಚ್ಚಾಟ ನಡೆಸಿದ ತಪ್ಪಿಗೆ ಭಾರೀ ದಂಡ ಕಟ್ಟಿದ ಆರೋಪಿ ಮಾಡಿದ್ದೇನು

Sampriya
ಸೋಮವಾರ, 10 ಫೆಬ್ರವರಿ 2025 (14:48 IST)
Photo Courtesy X
ಚಾಮರಾಜನಗರ: ರಸ್ತೆಗೆ ಬಂದಿದ್ದ ಕಾಡಾನೆ ಜೊತೆ ಫೋಟೋ ಕ್ಲಿಕ್ಕಿಸಿಕೊಂಡು ಚೆಲ್ಲಾಟ ಆಡಿದ್ದ ಆರೋಪಿಗೆ ಅರಣ್ಯ ಇಲಾಖೆ ₹ 25 ಸಾವಿರ ರೂಪಾಯಿ ದಂಡ ವಿಧಿಸಿದೆ. ಜೊತೆಗೆ ವನ್ಯಜೀವಿಗಳಿಗೆ ತೊಂದರೆ ಕೊಡದಂತೆ ಮುಚ್ಚಳಿಕೆ ಬರೆಸಿಕೊಂಡು ಎಚ್ಚರಿಕೆ ನೀಡಿದೆ.

ಗುಂಡ್ಲುಪೇಟೆಯ ಶಾಹುಲ್ ಹಮೀದ್ ಎಂಬವರು ₹ 25 ಸಾವಿರ ದಂಡ ಕಟ್ಟಿದ್ದಾರೆ. ಆಹಾರ ಅರಸಿ ರಸ್ತೆಗಿಳಿದ ಕಾಡಾನೆ ಮುಂದೆ ಫೋಟೋಗಾಗಿ ಹುಚ್ಚಾಟ ಮೆರೆದಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು.

ಗುಂಡ್ಲುಪೇಟೆ- ಊಟಿ ಹೆದ್ದಾರಿ ಹಾದುಹೋಗುವ ಬಂಡೀಪುರದಲ್ಲಿ ಕಾಡಾನೆ ಮುಂದೆ ಕಿರುಚಾಡಿರುವುದು ವಿಡಿಯೊದಲ್ಲಿ ಸೆರೆಯಾಗಿತ್ತು. ರಸ್ತೆಗೆ ಬಂದ ಕಾಡಾನೆ ಕಂಡು ಫೋಟೋ ತೆಗೆಸಿಕೊಂಡು ಕಿರುಚಾಡಿ ಕೀಟಲೆ ಮಾಡಿದ್ದರು‌. ಕಾಡಾನೆ ಎದುರು ಹುಚ್ಚಾಟ ಮೆರೆದ ಯುವಕನನ್ನು ಬಂಧಿಸಬೇಕೆಂದು ಒತ್ತಾಯವೂ ಕೇಳಿಬಂದಿತ್ತು. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದ್ದಂತೆ ಎಚ್ಚೆತ್ತ ಬಂಡೀಪುರ ಅರಣ್ಯ ಇಲಾಖೆಯು 25 ಸಾವಿರ ರೂ. ದಂಡ ವಿಧಿಸಿ ಬಿಸಿ ಮುಟ್ಟಿಸಿದೆ.

ದಂಡ ಪಾವತಿಸಿದ ಶಾಹುಲ್ ಹಮೀದ್ ವಿಡಿಯೋದಲ್ಲಿ ಮಾತನಾಡಿದ್ದು, ಬಂಡೀಪುರ ರಾಷ್ಟ್ರೀಯ ಉದ್ಯಾನವನದ ವಾಪ್ತಿಯಲ್ಲಿ ಊಟಿಗೆ ಹೋಗುವಾಗ ಆನೆ ನಾನು ಮುಂದೆ ಫೋಟೊ ಹಾಗೂ ವಿಡಿಯೋಗಳನ್ನು ಕ್ಲಿಕ್ಕಿಸಿದ್ದು, ಇದಕ್ಕಾಗಿ ₹ 25 ಸಾವಿರ ದಂಡ ಕಟ್ಟಿದ್ದೇನೆ. ಈ ರಾಷ್ಟ್ರೀಯ ಉದ್ಯಾನವನ ಪರಿಸರದಲ್ಲಿ ಪ್ಲಾಸ್ಟಿಕ್ ಎಸೆಯುವುದು, ವಾಹನ ನಿಲ್ಲಿಸುವುದು​ ಹಾಗೂ ವಿಡಿಯೋ, ಫೋಟೊ ಸೆರೆಹಿಡಿಯುವುದು ತಪ್ಪಾಗಿದೆ. ಹೀಗಾಗಿ, ಅಂತಹ ತಪ್ಪುಗಳನ್ನು ಯಾರೂ ಮಾಡಬಾರದು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಳಕು ಕಿಡ್ನಿ ನೀಡಿದ್ದೇನೆ ಎಂದಿದ್ದಾರೆ, ನನ್ನ ತಪ್ಪು ಯಾರೂ ಮಾಡಬೇಡಿ: ಲಾಲು ವಿರುದ್ಧ ಕಿಡಿಕಾರಿದ ಪುತ್ರಿ ರೋಹಿಣಿ

ಭಯೋತ್ಪಾದನಾ ಜಾಲ ಹಿನ್ನೆಲೆ: ಅನಂತ್‌ನಾಗ್‌ನ ವೈದ್ಯರ ಮನೆ ಮೇಲೆ ಸಿಐಕೆ ದಾಳಿ

ಅಣ್ಣ ಶಿವಕುಮಾರ್ ಸಿಎಂ ಆಗುವ ಭವಿಷ್ಯದ ಬಗ್ಗೆ ಡಿಕೆ ಸುರೇಶ್ ಹೇಳಿದ್ದೇನು ಗೊತ್ತಾ

ಧರ್ಮಸ್ಥಳ ಬುರುಡೆ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ

Karnataka Weather:ಕರಾವಳಿಯಲ್ಲಿ ಮಳೆ ನಿರೀಕ್ಷೆ, ಉತ್ತರ ಕರ್ನಾಟಕದಲ್ಲಿ ಶೀತಗಾಳಿ ಸಾಧ್ಯತೆ

ಮುಂದಿನ ಸುದ್ದಿ
Show comments