Publish Date: Sat, 02 Sep 2017 (16:09 IST)
Updated Date: Sat, 02 Sep 2017 (16:11 IST)
ನನಗೂ ಸುಮಾರು ಮಂದಿ ಏಟು ಕೊಟ್ಟಿದ್ದಾರೆ. ಆದಾಗ್ಯೂ ಗಟ್ಟಿಯಾಗಿ ಇಲ್ಲಿನಿಂತು ಮಾತನಾಡುತ್ತಿದ್ದೇನೆ ಎಂದು ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಕೃಷಿಕ ಸರ್ವೋದಯ ಫೌಂಡೇಶನ್ ಸಂಸ್ಥೆಯ ಬೆಳ್ಳಿಮಹೋತ್ಸವ ಕಾರ್ಯಕ್ರಮದಲ್ಲಿ ಸಚಿವ ಡಿ.ಕೆ.ಶಿವಕುಮಾರ್, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಪಾಲ್ಗೊಂಡಿದ್ದರು.
ಯಾರು ಯಾರು ಏಟು ಕೊಟ್ಟಿದ್ದಾರೆ ಎನ್ನುವುದು ನನಗೆ ಗೊತ್ತಿದೆ. ಇಂತಹ ಸಂಕಷ್ಟದಿಂದ ಹೊರಬರಲು ತಿಂಗಳುಗಳೇ ಬೇಕಾಗಬಹುದು ಎಂದು ತಿಳಿಸಿದ್ದಾರೆ
ದೇವೇಗೌಡರು ತುಂಬಾ ಕಷ್ಟ ಪಟ್ಟು ಪ್ರಧಾನಿಯಾಗಿದ್ದಾರೆ. ಅವರಿಗೆ ಎಷ್ಟೋ ಜನ ಕಾಲೆಳೆದಿದ್ದಾರೆ. ಎಲ್ಲವನ್ನು ಮೀರಿ ಪ್ರಧಾನಿಯಂತಹ ಉನ್ನತ ಸ್ಥಾನಕ್ಕೆ ಏರಿರುವುದು ಸುಲಭವಲ್ಲ ಎಂದು ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಹೊಗಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.