Select Your Language

Notifications

webdunia
webdunia
webdunia
webdunia

ಸ್ಯಾಂಟ್ರೋ ರವಿ ಹಗರಣದಲ್ಲಿ ನಾನು ಸ್ವಚ್ಛವಾಗಿದ್ದೇನೆ : ಗೃಹ ಸಚಿವ

I am clean in Santro Ravi scam
bangalore , ಮಂಗಳವಾರ, 24 ಜನವರಿ 2023 (18:51 IST)
ಸ್ಯಾಂಟ್ರೋ ರವಿ ಹಗರಣದಲ್ಲಿ ತಮ್ಮ ಮೇಲೆ ಆರೋಪ ವಿಚಾರಕ್ಕೆ ಪ್ರತಿಕ್ರಿಯಿಸಿದ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು, ನಾನು ಸ್ವಚ್ಛವಾಗಿದ್ದೇನೆ.ಯಾರ್ಯಾರೋ ಬಂದು ನಮ್ಮ ಜೊತೆ ಫೋಟೋ ತೆಗೆಸಿಕೊಳ್ಳುತ್ತಿರುತ್ತಾರೆ. ಅದನ್ನು ಇಟ್ಟುಕೊಂಡು ಆರೋಪ ಮಾಡಿದ್ರೆ ಹೇಗೆ? ಎಂದು ತಿರುಗೇಟು ನೀಡಿದ್ದಾರೆ. ವಿಕಾಸಸೌಧದಲ್ಲಿ ಇಂದು ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಸ್ಯಾಂಟ್ರೋ ರವಿ ಪ್ರಕರಣವನ್ನು ಸಿಐಡಿ ತಂಡಕ್ಕೆ ತನಿಖೆಗೆ ಆದೇಶ ಮಾಡಲಾಗಿದೆ. ಸ್ವತಂತ್ರವಾಗಿ ತನಿಖೆ ಮಾಡಲು ಅವಕಾಶ ಕೊಟ್ಟಿದ್ದೇವೆ. ಯಾವ ಅಧಿಕಾರಿಗೆ ಬೆದರಿಕೆ ಹಾಕಿದ್ದಾರೆ. ಏನು ಮಾಹಿತಿ ಇದೆ ಎಂಬುದನ್ನು ತಿಳಿದು ತನಿಖೆ ಮಾಡುತ್ತಾರೆ. ಪೊಲೀಸ್ ಹಗರಣದ ತನಿಖೆಯನ್ನು ಸಿಐಡಿಗೆ ಕೊಟ್ಟಿದ್ದೇವೆ. ಅದು ತನಿಖೆ ನಡೆದು ಕೆಲವರ ಬಂಧನ ಆಗಿದೆ. ಯಾರು ಹೊರಗಡೆ ಮಾತನಾಡುತ್ತಾರೋ ಅವರು ಸಾಕ್ಷಿ ಕೊಡಲಿ‌ ಎಂದು ಸವಾಲು ಹಾಕಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರಿನಲ್ಲಿ ಬಿತ್ತು ಹಣದ ಮಳೆ