Select Your Language

Notifications

webdunia
webdunia
webdunia
Saturday, 5 April 2025
webdunia

ನಾನು ಆರೋಗ್ಯವಾಗಿದ್ದೇನೆ, ಆತಂಕ ಪಡೋ ಅಗತ್ಯವಿಲ್ಲ: ದೇವೇಗೌಡ

ರಾಜಕೀಯ
ಬೆಂಗಳೂರು , ಶುಕ್ರವಾರ, 23 ಸೆಪ್ಟಂಬರ್ 2022 (07:28 IST)
ಬೆಂಗಳೂರು : ನನ್ನ ಆರೋಗ್ಯ ಉತ್ತಮವಾಗಿದ್ದು, ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದೇನೆ ಎಂದು ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ ಅವರು ತಿಳಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಸ್ವಲ್ಪ ಪ್ರಮಾಣದಲ್ಲಿ ಅನಾರೋಗ್ಯ ಉಂಟಾದ ಕಾರಣಕ್ಕೆ ವೈದ್ಯರು ವಿಶ್ರಾಂತಿಗೆ ಸಲಹೆ ಮಾಡಿದ್ದರು. ಆದಕಾರಣ ಕೆಲ ಕಾಲ ಮನೆಯಲ್ಲೇ ವಿಶ್ರಾಂತಿ ಪಡೆಯಬೇಕಾಯಿತು.

ಇನ್ನು ಕೆಲ ದಿನ ಮನೆಯಲ್ಲೇ ಇದ್ದು ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ. ಮನೆಯಿಂದಲೇ ನನ್ನೆಲ್ಲಾ ರಾಜಕೀಯ, ಸಂಸದೀಯ ಹಾಗೂ ಪಕ್ಷದ ಜವಾಬ್ದಾರಿಗಳನ್ನು ನಿರ್ವಹಣೆ ಮಾಡಲಿದ್ದೇನೆ. ಹೀಗಾಗಿ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಕೆಲವು ದಿನಗಳ ಮಟ್ಟಿಗೆ ನನ್ನ ಭೇಟಿಗೆ ಬರುವುದು ಬೇಡ ಎಂದು ಮಾಜಿ ಪ್ರಧಾನಿ ಮನವಿ ಮಾಡಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ಅಪರಾಧಗಳ ಹಿನ್ನೆಲೆ ಮಾತ್ರ ಗಣನೆ, ಧರ್ಮ ಅಲ್ಲ : ಆರಗ ಜ್ಞಾನೇಂದ್ರ