Publish Date: Sun, 11 Feb 2024 (14:22 IST)
Updated Date: Sun, 11 Feb 2024 (14:31 IST)
ಬೆಂಗಳೂರು-ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ವಿಚಾರವನ್ನ ನಿಖಿಲ್ ಕುಮಾರಸ್ವಾಮಿ ನಿರಾಕರಿಸಿದ್ದಾರೆ.ನಾನು ಮಂಡ್ಯ ಕ್ಷೇತ್ರದ ಆಕಾಂಕ್ಷಿ ಅಲ್ಲ.ನಾನು ಇದನ್ನು ಹಿಂದೆಯೂ ಹೇಳಿದ್ದೆ.ನಾನು ಯು ಟರ್ನ್ ಹೊಡೆಯುವ ಗಿರಾಕಿ ಅಲ್ಲ.ಈಗ ನಾನು ಮಂಡ್ಯ ಆಕಾಂಕ್ಷಿ ಅಲ್ಲ.2019 ರಲ್ಲಿ ಅಭ್ಯರ್ಥಿ ಆಗಿದ್ದೆ, ಸೋತಿದ್ದೆ.ಈಗಲೂ ನನ್ನ ಸ್ಪರ್ಧೆಗೆ ಸಹಜವಾಗಿ ಮಂಡ್ಯ ಮುಖಂಡರ ಒತ್ತಾಯ ಇದೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಇನ್ನೂ ಕಳೆದ ನಾಲ್ಕು ದಿನಗಳಿಂದಲೂ ನಾನು ಗಮನಿಸ್ತಿದ್ದೇನೆ.ನಾನು ಯು ಟರ್ನ್ ಹೊಡೆಯಲ್ಲ.ನನ್ನ ನಿರ್ಧಾರದಲ್ಲಿ ನನಗೆ ಸ್ಪಷ್ಟತೆ ಇದೆ.ನಾನು ಮಂಡ್ಯ ಆಕಾಂಕ್ಷಿ ಅಲ್ಲ.ನೀವು ಬರಬೇಕು, ಚುನಾವಣೆಯಲ್ಲಿ ಪಾಲ್ಗೊಳ್ಳಬೇಕು ಅಂತ ಮಂಡ್ಯ ಮುಖಂಡರು, ಕಾರ್ಯಕರ್ತರು ಕರೆದರು.ಈ ಒತ್ತಡ ಕಾರಣವಾಗಿ ನಾನು ಮಂಡ್ಯ ಭಾಗದಲ್ಲಿ ಓಡಾಡಿದ್ದೆ.ಮೈತ್ರಿ ಬಲ ಪಡಸಬೇಕು, ಮತ್ತೆ ಮೋದಿಯವರು ಪ್ರಧಾನಿ ಆಗಬೇಕು.ನನ್ನ ಗಮನ 28 ಕ್ಷೇತ್ರಗಳ ಕಡೆಯೂ ಇರುತ್ತೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
geetha
Publish Date: Sun, 11 Feb 2024 (14:22 IST)
Updated Date: Sun, 11 Feb 2024 (14:31 IST)