Select Your Language

Notifications

webdunia
webdunia
webdunia
webdunia

ನಾನು ಮತ್ತಷ್ಟು ಗಟ್ಟಿಯಾಗಿದ್ದೇನೆ : ಬೊಮ್ಮಾಯಿ

ನಾನು ಮತ್ತಷ್ಟು ಗಟ್ಟಿಯಾಗಿದ್ದೇನೆ : ಬೊಮ್ಮಾಯಿ
ಬೆಂಗಳೂರು , ಗುರುವಾರ, 11 ಆಗಸ್ಟ್ 2022 (16:06 IST)
ಬೆಂಗಳೂರು : ಸಿಎಂ ಬದಲಾವಣೆ ವಿಚಾರವೆಲ್ಲಾ, ಕಾಂಗ್ರೆಸ್ಸಿಗರ ಕುತಂತ್ರ.

ನಾನು ಸ್ಥಿತ ಪ್ರಜ್ಞನಾಗಿದ್ದೇನೆ ಅಂತ ಹೇಳುವ ಮೂಲಕ ಕಾಂಗ್ರೆಸ್ ನಾಯಕರ ಸಿಎಂ ಬದಲಾವಣೆ ಹೇಳಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿರುಗೇಟು ನೀಡಿದ್ದಾರೆ.

ಕೋವಿಡ್ನಿಂದ ಗುಣಮುಖರಾದ ಬಳಿಕ ಇಂದು ನಿತ್ಯದ ಆಡಳಿತ ಕೆಲಸಗಳನ್ನ ಪ್ರಾರಂಭ ಮಾಡಿದ ಬೊಮ್ಮಾಯಿ ಅವರು, ಸಿಎಂ ಬದಲಾವಣೆ ಎನ್ನುವ ಕಾಂಗ್ರೆಸ್ ನಾಯಕರ ಹೇಳಿಕೆಗೆ ಕೊನೆಗೂ ಮೌನ ಮುರಿದಿದ್ದಾರೆ. 

ಸಿಎಂ ಬದಲಾವಣೆ ಕುರಿತು ಕಾಂಗ್ರೆಸ್ ಟ್ವೀಟ್ ಮತ್ತು ನಾಯಕರ ಹೇಳಿಕೆಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಸಿಎಂ ಬದಲಾವಣೆ ಅಂತ ಕಾಂಗ್ರೆಸ್ ಈ ರೀತಿ ಟ್ವೀಟ್ ಮಾಡುತ್ತಿರುವುದು ಇದೇ ಮೊದಲಲ್ಲ.

ಅನೇಕ ಬಾರಿ ಟ್ವೀಟ್ ಮಾಡಿದ್ದಾರೆ. ಕಾಂಗ್ರೆಸ್ ಅವರ ಮನಸ್ಸಿನಲ್ಲಿ ಅತಂತ್ರ ಇದೆ. ಅದನ್ನು ರಾಜ್ಯದ ಜನತೆಗೆ ಹರಡುತ್ತಿದ್ದಾರೆ. ಆದರೆ ರಾಜ್ಯದ ಜನ ಅವರ ಮಾತು ನಂಬುವುದಿಲ್ಲ. ನಂಬುವ ಸ್ಥಿತಿಯಲ್ಲಿ ಜನರಿಲ್ಲ ಎಂದು ಟಾಂಗ್ ನೀಡಿದ್ದಾರೆ. 

 

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿಯವರು ದೇಶಕ್ಕಾಗಿ ಸತ್ತಿದ್ದಾರಾ ? - ಸಿದ್ದರಾಮಯ್ಯ ಪ್ರಶ್ನೆ