Publish Date: Thu, 24 Aug 2017 (18:14 IST)
Updated Date: Thu, 24 Aug 2017 (18:16 IST)
ನಾನು ಮಂತ್ರಿಸ್ಥಾನದ ಆಕಾಂಕ್ಷಿಯಲ್ಲ, ಸಚಿವ ಸ್ಥಾನ ಕೊಟ್ಟರೆ ನಿಭಾಯಿಸುತ್ತೇನೆ ಎಂದು ನೂತನ ವಿಧಾನಪರಿಷತ್ ಸದಸ್ಯ ಸಿಎಂ ಇಬ್ರಾಹಿಂ ಹೇಳಿದ್ದಾರೆ.
ವಿಧಾನಸೌಧದ ಕಾರ್ಯದರ್ಶಿ ಎಸ್.ಮೂರ್ತಿ, ಇಬ್ರಾಹಿಂ ಅವಿರೋಧ ಆಯ್ಕೆಯನ್ನು ಘೋಷಿಸಿ ಪ್ರಮಾಣ ಪತ್ರ ನೀಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಹೈಕಮಾಂಡ್ ಮತ್ತು ಸಿಎಂ ಸಿದ್ದರಾಮಯ್ಯ ನನ್ನ ಮೇಲೆ ಭರವಸೆಯಿಟ್ಟು ಅವಕಾಶ ನೀಡಿದ್ದಾರೆ. ಅವರ ಭರವಸೆಯನ್ನು ಉಳಿಸಿಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.
ಸಚಿವ ಸ್ಥಾನದ ಮೇಲೆ ಆಸೆಯಿಟ್ಟು ವಿಧಾನಪರಿಷತ್‌ಗೆ ಬಂದಿಲ್ಲ. ಒಂದು ವೇಳೆ, ಪಕ್ಷದ ಹೈಕಮಾಂಡ್ ಸಚಿವ ಸ್ಥಾನದ ನೀಡಿದಲ್ಲಿ ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ವಿಧಾನಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.