Publish Date: Mon, 05 Jun 2017 (20:40 IST)
Updated Date: Mon, 05 Jun 2017 (20:43 IST)
ನಾನು ಎಚ್.ಡಿ.ಕುಮಾರಸ್ವಾಮಿಯಂತೆ ದುರಂಹಕಾರಿಯಲ್ಲ. ಸುಪ್ರೀಂಕೋರ್ಟ್ ಆದೇಶ ಪಾಲಿಸಲು ಬದ್ಧನಾಗಿದ್ದೇನೆ ಎಂದು ಬಿಜೆಪಿ ಮುಖಂಡ ಮಾಜಿ ಸಚಿವ ಜನಾರ್ದನ ರೆಡ್ಡಿ ಗುಡುಗಿದ್ದಾರೆ.
ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಕೊಲ್ಹಾರ್ ಗ್ರಾಮದಲ್ಲಿ ಆಯೋಜಿಸದ ಬಿಜೆಪಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾಳೆ ಜಂತಕಲ್ ಮೈನಿಂಗ್ ಪ್ರಕರಣದ ಕುರಿತ ದಾಖಲೆಗಳನ್ನು ವಿಶೇಷ ತನಿಖಾ ದಳಕ್ಕೆ ನೀಡುತ್ತೇನೆ
ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣಾ ರಾಜ್ಯಗಳಲ್ಲಿ ಪ್ರವಾಸ ಮಾಡಿ ಬಿಜೆಪಿ ಪಕ್ಷವನ್ನು ಬಲಪಡಿಸಲು ಪ್ರಯತ್ನಿಸುತ್ತೇನೆ. ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ತಿಳಿಸಿದ್ದಾರೆ.
ಹೈಕಮಾಂಡ್ ಯಾವ ಹೊಣೆ ನೀಡುತ್ತದೆಯೋ ಅದನ್ನು ಬಿಜೆಪಿ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಹೊಣೆಯನ್ನು ನಿರ್ವಹಿಸುತ್ತೇನೆ. ಬಿಜೆಪಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವುದು ನಮ್ಮ ಮುಖ್ಯ ಗುರಿಯಾಗಿದೆ ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಹೇಳಿದ್ದಾರೆ.
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
http://kannada.fantasycricket.webdunia.com/
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.