Webdunia - Bharat's app for daily news and videos

Install App

ನನಗೆ ಅಧಿಕಾರದ ಆಸೆಯಿಲ್ಲ, ರಾಷ್ಟ್ರಪತಿ ಹುದ್ದೆಯ ಆಕಾಂಕ್ಷಿಯಲ್ಲ: ದೇವೇಗೌಡ

Webdunia
ಸೋಮವಾರ, 22 ಮೇ 2017 (14:01 IST)
ನನಗೆ ಅದಿಕಾರದ ಆಸೆಯಿಲ್ಲ, ರಾಷ್ಟ್ರಪತಿ ಹುದ್ದೆಯ ಆಕಾಂಕ್ಷಿಯಲ್ಲ. ಕೇವಲ ಜನತೆಯ ಬದುಕು ಹಸನುಗೊಳಿಸುವುದೇ ನನ್ನ ಗುರಿಯಾಗಿದೆ ಎಂದು ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
 
ಮಲೆ ಮಹದೇಶ್ವರ ದೇವಾಲಯದಲ್ಲಿ ದೇವರ ದರ್ಶನ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 130 ವರ್ಷಗಳಿಂದ ರಾಜ್ಯಕ್ಕೆ ಅನ್ಯಾಯವಾಗುತ್ತಲಿದೆ. ಆದ್ದರಿಂದ ರಾಜ್ಯದಲ್ಲಿ ಪ್ರಾದೇಶಿಕ ಪಕ್ಷ ಅಗತ್ಯವಾಗಿದೆ ಎಂದರು.
 
ಜೆಡಿಎಸ್ ಪಕ್ಷವನ್ನು ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ. ಪಕ್ಷದ ತತ್ವ ಸಿದ್ದಾಂತವನ್ನು ಒಪ್ಪಿದಲ್ಲಿ ಯಾರು ಬೇಕಾದರೂ ಪಕ್ಷಕ್ಕೆ ಸೇರ್ಪಡೆಯಾಗಬಹುದು. ಮುಂದಿನ ವಿಧಾನಸಭೆ ಚುನಾವಣೆಗಾಗಿ ರಾಜ್ಯದಾದ್ಯಂತ ಪ್ರವಾಸ ಮಾಡುತ್ತೇನೆ ಎಂದು ತಿಳಿಸಿದ್ದಾರೆ.
 
ರಾಷ್ಟ್ರೀಯ ಪಕ್ಷಗಳಲ್ಲಿ ಹಣಬಲ ಅಧಿಕಾರದ ಬಲವಿರಬಹುದು. ಆದರೆ, ನಮ್ಮ ಬಳಿ ಜನಬಲವಿದೆ.ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರುವುದು ಖಚಿತ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಗುಡುಗಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments