Publish Date: Fri, 20 Jan 2017 (12:25 IST)
Updated Date: Fri, 20 Jan 2017 (12:27 IST)
ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವ ಸುದ್ದಿ ಶುದ್ಧ ಸುಳ್ಳು ಎಂದು ಮಾಜಿ ಸಚಿವ ವಿ.ಸೋಮಣ್ಣ ಯೂಟರ್ನ್ ಹೊಡೆದಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತೇನೆ ಎಂಬ ಸುದ್ದಿಗಳು ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ಇದರಿಂದ ನನ್ನ ಮನಸ್ಸಿಗೆ ನೋವಾಗಿದೆ. ನಾನು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಬಿಜೆಪಿ ಪಕ್ಷದಿಂದ 2 ಬಾರಿ ಎಂಎಲ್‌ಎಲ್ ಆಗಿದ್ದೇನೆ. ನಾನು ಬಿಜೆಪಿ ಪಕ್ಷ ತೊರೆಯುವ ಪ್ರಶ್ನೆಯೇ ಇಲ್ಲ. ಪಕ್ಷದಲ್ಲಿ ಸಣ್ಣಪುಟ್ಟ ಗೊಂದಲಗಳಿವೆ. ಸದ್ಯದಲ್ಲಿಯೇ ಬಗೆಹರಿಸಿಕೊಳ್ಳುತ್ತೇವೆ ಎಂದರು.
ತಾವು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವ ಕುರಿತು ಮಾಧ್ಯಮಗಳಲ್ಲಿ ಸುದ್ದಿ ಬರುತ್ತಿದೆ. ಆದರೆ, ಈ ಸುದ್ದಿಗಳು ಸುಳ್ಳು ಎನ್ನಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ಮಾಜಿ ಸಚಿವ ವಿ.ಸೋಮಣ್ಣ ಅವರು ನಿನ್ನೆ ಪರೋಕ್ಷವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವ ಇಂಗಿತ ವ್ಯಕ್ತಪಡಿಸಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ