Select Your Language

Notifications

webdunia
webdunia
webdunia
webdunia

ಜೆಡಿಎಸ್ ಪಕ್ಷ ಸೇರ್ಪಡೆಯಾಗುವುದು ವದಂತಿ: ಸತೀಶ್ ಜಾರಕಿಹೊಳಿ ಸ್ಪಷ್ಟನೆ

ಜೆಡಿಎಸ್ ಪಕ್ಷ ಸೇರ್ಪಡೆಯಾಗುವುದು ವದಂತಿ: ಸತೀಶ್ ಜಾರಕಿಹೊಳಿ ಸ್ಪಷ್ಟನೆ
ಮೈಸೂರು , ಶುಕ್ರವಾರ, 27 ಜನವರಿ 2017 (15:38 IST)
ನಾನು ಜೆಡಿಎಸ್ ಪಕ್ಷ ಸೇರ್ಪಡೆಯಾಗುತ್ತಿದ್ದೇನೆ ಎನ್ನುವುದು ವದಂತಿ ಅಷ್ಟೇ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.
 
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಪಕ್ಷ ಸೇರ್ಪಡೆಯಾಗುತ್ತಿದ್ದೇನೆ ಎನ್ನುವುದು ವದಂತಿ ಅಷ್ಟೇ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಬಿಟ್ಟು ಬೇರೆ ಪಕ್ಷಕ್ಕೆ ಹೋಗುವುದಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರೊಂದಿಗೆ ಕೆಲಸ ಮಾಡಿಕೊಂಡು ಹೋಗುತ್ತೇನೆ ಎಂದು ತಿಳಿಸಿದರು.
 
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನನ್ನನ್ನು ಸಚಿವ ಸಂಪುಟದಿಂದ ಹೊರಕ್ಕೆ ಹಾಕಿಲ್ಲ. ನಾನೇ ರಾಜೀನಾಮೆ ನೀಡಿ ಹೊರಬಿದಿದ್ದೇನೆ. ನನಗೆ ಮಂತ್ರಿ ಆಗುವ ಆಸೆ ಇದ್ದರೇ 6 ತಿಂಗಳ ಹಿಂದೆಯೇ ಆಗುತ್ತಿದ್ದೆ ಎಂದರು.
 
ತಮ್ಮ ಸಹೋದರನ ನಿವಾಸದ ಮೇಲೆ ಐಟಿ ದಾಳಿ ನಡೆದಿರುವ ಕುರಿತು ಪ್ರತಿಕ್ರಿಯೆ ನೀಡಿರುವ ಮಾಜಿ ಸಚಿವ ಸತೀಶ್ ಜಾರಕಿಹೊಳಿ, ಐಟಿ ಅಧಿಕಾರಿಗಳು ಖಚಿತ ಮಾಹಿತಿ ಸಂಗ್ರಹಿಸಿಯೇ ದಾಳಿ ನಡೆಸುತ್ತಾರೆ ಎಂದು ಹೇಳಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಫೇಸ್‌ಬುಕ್ ಲೈವ್ ಗ್ಯಾಂಗ್ ರೇಪ್: ಮೂವರ ಬಂಧನ