ಬೆಂಗಳೂರು: ನಮ್ಮ ಗಾಡಿ ಫುಲ್ ಆಗಿದೆ. ಇದೀಗ ಜೆಡಿಎಸ್ 18 ಶಾಸಕರನ್ನು ತೆಗೆದುಕೊಂಡು ನಾವೇನು ಮಾಡುವುದು ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಸುದ್ದಿಗಾರರ ಜೊತೆ ಮಾತನಾಡಿದ ಅವರು, 'ಓವರ್ ಲೋಡ್ ಆಗಿದ್ದರೂ ನಮ್ಮದು ಕಾಂಗ್ರೆಸ್ ಪಕ್ಷವೇ. ಇಲ್ಲಿಯೇ ಅಧ್ಯಕ್ಷ ಆಗಬೇಕು. ಇಲ್ಲಿಯೇ ಮುಖ್ಯಮಂತ್ರಿಯಾಗಬೇಕು. ಸದ್ಯಕ್ಕೆ ವೇಯ್ಟಿಂಗ್ ಲಿಸ್ಟ್‌ನಲ್ಲಿದ್ದು, ಇಲ್ಲಿಯೇ ಕಾಯುತ್ತೇನೆ ಎನ್ನುವ ಮೂಲಕ ಸಿಎಂ ಕುರ್ಚಿ ಆಕಾಂಕ್ಷಿ ಎಂದು ಮತ್ತೊಮ್ಮೆ ಹೇಳಿಕೊಂಡಿದ್ದಾರೆ.
ಇನ್ನೂ ಸಿಎಂ ರೇಸ್‌ನಲ್ಲಿ ತಮ್ಮ ಸ್ಥಾನದ ಬಗ್ಗೆ ಹೇಳಿಕೊಳ್ಳುತ್ತ, ನಾನು ಆರ್‌ಎಸಿ ಟಿಕೆಟ್‌ನಲ್ಲಿದ್ದೇನೆ. ಇಲ್ಲಿಯೇ ಕಾಂಗ್ರೆಸ್ ಪಕ್ಷದಲ್ಲಿಯೇ ಕಾಯ್ತೇನೆ. ಯಾರಾದ್ರೂ ಮೆಜೆಸ್ಟಿಕ್ ಜಾಮ್‌ನಲ್ಲಿ ಸಿಕ್ಕಿಹಾಕಿಕೊಂಡು ಬರುವುದು ತಡವಾದರೆ ನಮಗೆ ಅವಕಾಶ ಸಿಗಬಹುದು ಎಂದರು.
'ಎಲ್ಲರೂ ಆರ್‌ಎಸಿ ಟಿಕೆಟ್ ಇಟ್ಟುಕೊಂಡೇ ಕಾಯ್ತಿದ್ದಾರೆ. ಇಲ್ಲಿ ಶಿಂಧೆ, ಅಜಿತ್ ಪವರ್ ಯಾರೂ ಇಲ್ಲ. ಆ ಸಾಮರ್ಥ್ಯ ಇಲ್ಲಿ ಯಾರಿಗೂ ಇಲ್ಲ' ಎಂದರು .