Publish Date: Mon, 24 Dec 2018 (12:18 IST)
Updated Date: Mon, 24 Dec 2018 (12:25 IST)
ಬೆಂಗಳೂರು : ರಾಜೀನಾಮೆ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ರಮೇಶ್ ಜಾರಕಿಹೊಳಿ ಮಾಧ್ಯಮಗಳ ವಿರುದ್ಧ ಗರಂ ಆಗಿದ್ದಾರೆ.
‘ಹೀರೊಗಳನ್ನು ವಿಲನ್, ವಿಲನ್ ಗಳನ್ನು ಹೀರೊ ಮಾಡಿದ್ದಾರೆ. ನನ್ನ ಜೊತೆ ಎಷ್ಟು ಶಾಸಕರಿದ್ದಾರೆ ಎಂದು ನಿಮಗ್ಯಾಕೆ ಹೇಳಲಿ?’ ಎಂದು ಮಾಧ್ಯಮಗಳ ಮೇಲೆ ಶಾಸಕ ರಮೇಶ್ ಜಾರಕಿಹೊಳಿ ಕಿಡಿಕಾರಿದ್ದಾರೆ.
ಹಾಗೇ ರಾಜೀನಾಮೆ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು,’ ನಾನು ರಾಜೀನಾಮೆ ನೀಡಲು ಸಿದ್ಧ. ರಾಜೀನಾಮೆ ಯಾವಾಗ ನೀಡಬೇಕು ಎನ್ನುವುದರ ಬಗ್ಗೆ ಇನ್ನೂ ಅಂತಿಮ ತೀರ್ಮಾನ ಕೈಗೊಂಡಿಲ್ಲ. ಆದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಕ್ಕೆ ಬದ್ಧನಾಗಿದ್ದೇನೆ. ಇನ್ನು 4 ದಿನಗಳಲ್ಲಿ ಎಲ್ಲವನ್ನು ಸ್ಪಷ್ಟವಾಗಿ ತಿಳಿಸುವೆ’ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.