ಇನ್ನು ಮೂರೂವರೆ ವರ್ಷ ನಾನೇ ಮುಖ್ಯಮಂತ್ರಿಯಾಗಿರುತ್ತೇನೆ- ಸಿಎಂ ಬಿಎಸ್ ಯಡಿಯೂರಪ್ಪ

ಶುಕ್ರವಾರ, 29 ನವೆಂಬರ್ 2019 (11:36 IST)
ಹಾವೇರಿ : ಇನ್ನುಮೂರುವರೆ ವರ್ಷ ನಾನೇ ಮುಖ್ಯಮಂತ್ರಿಯಾಗಿರುತ್ತೇನೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಹಾವೇರಿಯಲ್ಲಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ಅವರು, ಸುದ್ದಿಗಾರರೊಂದಿಗೆ ಮಾತನಾಡಿ, ನಮಗೆ ಯಾರ ಸಹಕಾರವೂ ಬೇಡ. ಬಹುಮತ ಬಂದೇ ಬರುತ್ತೆ. ಬೇರೆಯವರು ಸರ್ಕಾರ ರಚಿಸೋ ಪ್ರಮೇಯವೇ ಬರೋದಿಲ್ಲ ಎಂದು ಹೇಳಿದ್ದಾರೆ.


ಹಾಗೇ ಉಪಚುನಾವಣೆ ನಡೆಯುತ್ತಿರೋ 15 ಕ್ಷೇತ್ರಗಳಲ್ಲೂ ಗೆಲುವು ನಮ್ಮದೆ . ಯಾರು ಏನೇ ಹೇಳಿದ್ರೂ ಮತದಾರರು ನಮ್ಮ ಪರವಾಗಿದ್ದಾರೆ. ಇನ್ನುಮೂರುವರೆ ವರ್ಷ ನಾನೇ ಮುಖ್ಯಮಂತ್ರಿಯಾಗಿರುತ್ತೇನೆ. ಸಿದ್ದರಾಮಯ್ಯ ಮೂರೂವರೆ ವರ್ಷ ವಿಪಕ್ಷದಲ್ಲಿಯೇ ಇರುತ್ತಾರೆ ಎಂದು ಅವರು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಸ್ವಗ್ರಾಮದಲ್ಲಿಯೇ ಮಹೇಶ್ ಕುಮಟಳ್ಳಿಗೆ ಶಾಕ್ ನೀಡಿದ ಮತದಾರರು