Select Your Language

Notifications

webdunia
webdunia
webdunia
webdunia

ಬಿಜೆಪಿ ಸರ್ಕಾರ ಬರಲು ಕಾರಣನಾಗಿದ್ದಕ್ಕೆ ನನಗೆ ತುಂಬಾ ನೋವಿದೆ : ವಿಶ್ವನಾಥ್

ಬಿಜೆಪಿ ಸರ್ಕಾರ ಬರಲು ಕಾರಣನಾಗಿದ್ದಕ್ಕೆ ನನಗೆ ತುಂಬಾ ನೋವಿದೆ : ವಿಶ್ವನಾಥ್
ಮೈಸೂರು , ಸೋಮವಾರ, 3 ಏಪ್ರಿಲ್ 2023 (13:35 IST)
ಮೈಸೂರು : ಬಿಜೆಪಿಯಂತಹ ಭ್ರಷ್ಟ ಸರ್ಕಾರ ಬರಲು ನಾನು ಕಾರಣವಾಗಿದ್ದಕ್ಕೆ ನನಗೆ ಅತೀವ ನೋವಿದೆ ಎಂದು ಬಿಜೆಪಿ ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಬೇಸರ ವ್ಯಕ್ತಪಡಿಸಿದರು.

ಮೈಸೂರಿನ ನ್ಯಾಯಾಲಯದ ಮುಂಭಾಗ ಪಶ್ಚಾತಾಪ ಸತ್ಯಾಗ್ರಹ ಮಾಡಿ ಮಾತನಾಡಿದ ಅವರು, ಡಬಲ್ ಇಂಜಿನ್ ಸರ್ಕಾರ ಇದ್ದರೆ ರಾಜ್ಯಕ್ಕೆ ಒಳಿತೆಂದು ಸಮ್ಮಿಶ್ರ ಸರ್ಕಾರ ಬಿಳಿಸಿ ಬಿಜೆಪಿ ಸರ್ಕಾರ ತಂದೆವು. ಆದರೆ ಬಿಜೆಪಿ ಪರಮ ಭ್ರಷ್ಟ ಸರ್ಕಾರವಾಗಿದೆ. ಇಂತಹ ಸರ್ಕಾರ ಬರಲು ನಾನು ಕಾರಣವಾಗಿದ್ದಕ್ಕೆ ನನಗೆ ಅತೀವ ನೋವಿದೆ

ನಾನು ಬಿಜೆಪಿ ಪಕ್ಷದಿಂದ ವಿಧಾನ ಪರಿಷತ್ ಸದಸ್ಯನಾಗಿಲ್ಲ. ಸಾಹಿತ್ಯ ಕೋಟಾದಲ್ಲಿ ಎಂಎಲ್ಸಿ ಆಗಿದ್ದೇನೆ. ಈ ಚುನಾವಣೆಯಲ್ಲಿ ನಾನು ಕಾಂಗ್ರೆಸ್ ಬೆಂಬಲಿಸುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಗ್ರಾಹಕರೇ ಎಚ್ಚರ! ಸರ್ಕಾರದ ಹೆಸರಲ್ಲಿ ನಕಲಿ ವಾಟ್ಸಪ್ ಮೆಸೇಜ್