ಜೈಲಿಗೆ ಹಾಕಿ, ನೇಣಿಗೆ ಹಾಕಿ ನಿಮ್ಮನ್ನು ನಾನು ತಡೆಯುವುದಿಲ್ಲ: ಕುಮಾರಸ್ವಾಮಿ

Webdunia
ಬುಧವಾರ, 24 ಮೇ 2017 (15:45 IST)
ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ನಿಮ್ಮ ಬಳಿ ದಾಖಲೆ ಇದ್ದರೆ ಏನ್ ಬೇಕಾದ್ರೂ ಮಾಡಿ ನಾನು ತಡೆಯುವುದಿಲ್ಲ ಎಂದು ಹೇಳಿದ್ದಾರೆ.
 
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ವೇಳೆ, ನಿಮ್ಮ ಬಳಿ ದಾಖಲೆಗಳಿದ್ದಲ್ಲಿ ನನ್ನನ್ನು ಜೈಲಿಗೆ ಹಾಕಿ, ನೇಣಿಗೆ ಹಾಕಿ ನಿಮ್ಮನ್ನು ನಾನು ತಡೆಯುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.
 
ಪ್ರಸಕ್ತ ರಾಜಕೀಯ ಪರಿಸ್ಥಿತಿಯಲ್ಲಿ ಮಹಾತ್ಮಾ ಗಾಂಧಿಯಿದ್ದರೂ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತಿತ್ತು. ಇಲ್ಲವೇ ರಾಜಕೀಯ ನಿವೃತ್ತಿ ಹೊಂದಬೇಕಾಗುತ್ತಿತ್ತು ಅಂತಹ ವಾತಾವರಣವಿದೆ ಎಂದರು.
 
ದೇವೇಗೌಡರ ಕುಟುಂಬ 20 ಸಾವಿರ ಕೋಟಿ ರೂ ಹಣವನ್ನು ಲೂಟಿ ಹೊಡೆದಿದೆ ಎಂದು ಕಾಂಗ್ರೆಸ್ ಕಾರ್ಯಕರ್ತ ವೆಂಕಟೇಶ್‌ಗೌಡ್ ಎನ್ನುವವರು ಆದಾಯ ತೆರಿಗೆ ಇಲಾಖೆಗೆ ದೂರು ನೀಡಿದ್ದಾರೆ.
 
ಆದರೆ, ಆರೋಪವನ್ನು ತಳ್ಳಿಹಾಕಿದ ಕುಮಾರಸ್ವಾಮಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಕುಮ್ಮಕ್ಕಿನ ಮೇರೆಗೆ ದೂರು ದಾಖಲಿಸಲಾಗಿದೆ. ಅದಕ್ಕೆ ನನ್ನ ಬಳಿ ಸಾಕ್ಷ್ಯಾಧಾರಗಳಿವೆ ಎಂದು ತಿಳಿಸಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಸಿಎಂ ಆಗ್ತಾರಾ: ಕೋಡಿ ಶ್ರೀಗಳ ಸ್ಪೋಟಕ ಭವಿಷ್ಯ

ಚೆಲುವರಾಯಸ್ವಾಮಿ ನೇತೃತ್ವದಲ್ಲಿ ದೆಹಲಿಗೆ ಕೈ ನಾಯಕರ ದಂಡು

ಬಿಬಿಎಂಪಿ ಖಾತಾ ಸರ್ಟಿಫಿಕೇಟ್ ಆನ್ ಲೈನ್ ನಲ್ಲಿ ಪಡೆಯುವುದು ಹೇಗೆ

Gen Z ಗಾಗಿ ಅಂಚೆ ಇಲಾಖೆಯಿಂದ ಹೊಸ ಪ್ಲ್ಯಾನ್: ಇಲ್ಲಿದೆ ಡೀಟೈಲ್ಸ್

ಗಮನಿಸಿ: MGNREGA ಯೋಜನೆಗೆ ದೊಡ್ಡ ಬದಲಾವಣೆ ತಂದ ಕೇಂದ್ರ ಸರ್ಕಾರ, ಕಾರ್ಮಿಕರಿಗೆ ಗುಡ್ ನ್ಯೂಸ್

ಮುಂದಿನ ಸುದ್ದಿ
Show comments