Webdunia - Bharat's app for daily news and videos

Install App

ನೂರು ಎಫ್ಐಆರ್ ಹಾಕಿದರೂ ನನ್ನ ದನಿ ಅಡಗಿಸಲು ಅಸಾಧ್ಯ: ಸರ್ಕಾರಕ್ಕೆ ಅಶೋಕ್‌ ಸವಾಲು

Sampriya
ಗುರುವಾರ, 19 ಸೆಪ್ಟಂಬರ್ 2024 (14:05 IST)
Photo Courtesy X
ಬೆಂಗಳೂರು: ಒಂದಲ್ಲ ನೂರು ಎಫ್ಐಆರ್ ಹಾಕಿದರೂ ನನ್ನ ದನಿ ಅಡಗಿಸಲು ಸಾಧ್ಯವಿಲ್ಲ. ನಿಮ್ಮ ಗೊಡ್ಡು ಬೆದರಿಕೆಗಳಿಗೆ ಹೆದರುವುದಿಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಸವಾಲು ಹಾಕಿದ್ದಾರೆ.

ನಾಗಮಂಗಲ ಪಟ್ಟಣದಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಗಲಭೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ‌ಮಾಹಿತಿ ಹಂಚಿಕೊಂಡಿದ್ದಾರೆ ಎಂಬ ಆರೋಪದ ಮೇರೆಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮತ್ತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿದ ಆರ್. ಅಶೋಕ್, ಕೈಲಾಗದವನು ಮೈಪರಚಿಕೊಂಡ ಎಂಬಂತೆ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುದಳ್ಳುರಿಗೆ ಕಾರಣರಾದ ಮತಾಂಧರನ್ನು ಪತ್ತೆ ಹಚ್ಚಿ ಅವರ ಹೆಡೆಮುರಿ ಕಟ್ಟಬೇಕಾದ ಗೃಹ ಸಚಿವ ಜಿ.ಪರಮೇಶ್ವರ ಅವರು ವಿಪಕ್ಷ ನಾಯಕರ ಮೇಲೆ ಎಫ್ಐಆರ್ ಹಾಕಿರುವುದು ಹೇಡಿತನದ ಪರಮಾವಧಿ ಎಂದು ಅವರು ಎಂದಿದ್ದಾರೆ.

ಅಸಮರ್ಥ ಗೃಹ ಸಚಿವ ಜಿ.ಪರಮೇಶ್ವರ ಅವರೇ, ಕಳೆದ ಬುಧವಾರ ರಾತ್ರಿ ಬೆಂಗಳೂರಿನಿಂದ ಕೇವಲ 130 ಕಿ.ಮೀ ದೂರದಲ್ಲಿರುವ ನಾಗಮಂಗಲದಲ್ಲಿ ರಾಜ್ಯವೇ ಬೆಚ್ಚಿಬೀಳುವಂತಹ ಘಟನೆ ನಡೆದು ಒಂದು ವಾರ ಕಳೆದಿದ್ದರೂ ಈವರೆಗೂ ತಾವು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವ ಕೆಲಸ ಮಾಡಿಲ್ಲ. ಘಟನಾ ಸ್ಥಳಕ್ಕೆ ಹೋಗಿ ಅಲ್ಲಿ ಆಸ್ತಿ-ಪಾಸ್ತಿ ಕಳೆದುಕೊಂಡು, ಭಯಭೀತರಾಗಿರುವ ಸ್ಥಳೀಯರ ಅಳಲು, ದುಮ್ಮಾನ, ಆತಂಕ, ಆಕ್ರೋಶ ಕೇಳಿದ್ದಿದ್ದರೆ ತಮಗೆ ಪರಿಸ್ಥಿತಿಯ ಗಂಭೀರತೆ ಅರ್ಥವಾಗುತ್ತಿತ್ತು. ಆದರೆ ತಮಗೆ ಕರ್ತವ್ಯ ಪ್ರಜ್ಞೆಯೇ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ನನ್ನ ಮೇಲೆ ಎಫ್ಐಆರ್ ಹಾಕಿ ಏನು ಸಾಧಿಸಲು ಹೊರಟಿದ್ದೀರಿ? ನಾನು ಘಟನಾ ಸ್ಥಳಕ್ಕೆ ಭೇಟಿ ನೀಡಿದಾಗ ಸ್ಥಳೀಯರು, ಪ್ರತ್ಯಕ್ಷದರ್ಶಿಗಳು, ಪತ್ರಕರ್ತರು ವ್ಯಕ್ತಪಡಿಸಿರುವ ಅನುಮಾನವನ್ನ ನನ್ನ ಎಕ್ಸ್‌ ಖಾತೆ ಪೋಸ್ಟ್ ಮೂಲಕ ಸರ್ಕಾರದ ಗಮನಕ್ಕೆ ತರುವ ಪ್ರಯತ್ನ ಮಾಡಿದ್ದೇನೆಯೇ ಹೊರತು, ಯಾವುದೇ ಸುಳ್ಳು ಮಾಹಿತಿ ಹಂಚಿಕೊಂಡಿಲ್ಲ ಎಂದಿದ್ದಾರೆ.

ನಾನು ಹಂಚಿಕೊಂಡಿರುವ ದೃಶ್ಯಾವಳಿಗಳು ಚಿಕ್ಕಮಗಳೂರಿನಲ್ಲಿ ಮತಾಂಧರು ಪ್ಯಾಲೆಸ್ಟೀನ್‌ ಧ್ವಜ ಹಿಡಿದು ಮಾಡಿದ ಪುಂಡಾಟಿಕೆ, ದಾವಣಗೆರೆಯಲ್ಲಿ ಕೇಸರಿ ಧ್ವಜ ಹಾರಿಸಿದ ಹಿಂದೂಗಳ ಮೇಲೆ ಮತಾಂಧರು ಹಲ್ಲೆ ಮಾಡಿರುವ ಘಟನೆಗಳದ್ದು. ನನ್ನ ಪೋಸ್ಟ್‌ನಲ್ಲಿ ನಾನು ಉಲ್ಲೇಖ ಮಾಡಿರುವುದೂ ಅದನ್ನೇ. ರಾಜ್ಯದ ಅನೇಕ ಕಡೆಗಳಲ್ಲಿ ಗಣೇಶೋತ್ಸವವನ್ನೇ ಗುರಿಯಾಗಿಟ್ಟುಕೊಂಡು ನಡೆದಿರುವ ಇಂತಹ ಪ್ರಚೋದನಕಾರಿ ಘಟನೆಗಳ ಹಿಂದೆ ಮತೀಯ ಮೂಲಭೂತವಾದಿ ಸಂಘಟನೆಗಳ ಕೈವಾಡ ಇರಬಹುದು ಎಂದು ಜವಾಬ್ದಾರಿಯುತ ಪ್ರತಿಪಕ್ಷ ನಾಯಕನಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದೇನೆಯೇ ಹೊರತು ನಾನು ಯಾವುದೇ ಸುಳ್ಳು ಮಾಹಿತಿ ಹಂಚಿಕೊಂಡಿಲ್ಲ' ಎಂದು ಸಮರ್ಥಿಸಿಕೊಂಡಿದ್ದಾರೆ.

ನಾಗಮಂಗಲದಲ್ಲಿ ಪೆಟ್ರೋಲ್ ಬಾಂಬ್ ಹಾಕಿರುವ ದೃಶ್ಯಗಳು, ಕಲ್ಲು ಎಸೆದಿರುವ ದೃಶ್ಯಗಳು, ವಾಹನ, ಅಂಗಡಿಗಳನ್ನ ಧ್ವಂಸ ಮಾಡಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ, ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದರೂ ಇದೊಂದು ಸಣ್ಣ ಘಟನೆ, ಆಕಸ್ಮಿಕ ಘಟನೆ ಎಂದು ಜನರಿಗೆ ಸುಳ್ಳು ಮಾಹಿತಿ ನೀಡಿದ್ದಕ್ಕೆ ಅಸಲಿಗೆ ಗೃಹ ಸಚಿವ ಪರಮೇಶ್ವರ್ ಅವರ ಮೇಲೆ ಮೊದಲು ಎಫ್‌ಐಆರ್‌ ದಾಖಲಿಸಬೇಕು. ಸಚಿವರಿಗೆ ತಪ್ಪು ಮಾಹಿತಿ ನೀಡಿದ ಪೊಲೀಸರ ಮೇಲೆ ಎಫ್ಐಆರ್ ಹಾಕಬೇಕು. ಕೋಮುಗಲಭೆಗಳನ್ನ ತಡೆಯಲಾಗದ ನಾಲಾಯಕ್ ಸರ್ಕಾರ, ಮತಾಂಧರ ಹೆಡೆಮುರಿ ಕಟ್ಟಲಾಗದ ನಿಸ್ತೇಜ ಸರ್ಕಾರ ನನ್ನ ಮೇಲೆ ಎಫ್ಐಆರ್ ಹಾಕಿರುವುದು ಹೇಡಿತನದ ಲಕ್ಷಣ ಎಂದಿದ್ದಾರೆ.
 <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments