Publish Date: Thu, 13 Oct 2022 (18:50 IST)
Updated Date: Thu, 13 Oct 2022 (18:55 IST)
ಟ್ಯೂಶನ್ಗೆ ಬಂದ 10 ವರ್ಷದ ವಿದ್ಯಾರ್ಥಿನಿಯನ್ನು ಟ್ಯೂಶನ್ ಸೆಂಟರ್ನಲ್ಲಿ ಉಸ್ತುವಾರಿ ನೋಡಿಕೊಳ್ಳುವ ವ್ಯಕ್ತಿಯೇ ಕೊಲೆ ಮಾಡಿ ಶವವನ್ನು ನಿರ್ಮಾಣ ಹಂತದ ಕಟ್ಟಡದ ನೀರಿನ ಪಂಪ್ನಲ್ಲಿ ಹಾಕಿದ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದಲ್ಲಿ ನಡೆದಿತ್ತು. ಈ ಸಂಬಂಧ ಟ್ವೀಟ್ ಮಾಡಿರುವ ಮಾಜಿ ಸಿಎಂ H.D. ಕುಮಾರಸ್ವಾಮಿ, ಹೆತ್ತ ಮಗುವನ್ನು ಕಳೆದುಕೊಂಡು ಶೋಕದಲ್ಲಿರುವ ಆ ಬಾಲಕಿಯ ಪೋಷಕರ ದುಃಖದಲ್ಲಿ ನಾನೂ ಭಾಗಿ. ನೂರುಕಾಲ ಬಾಳಿ ಬದುಕಬೇಕಿದ್ದ ಮಗುವಿನ ದುರ್ಮರಣ ನನಗೆ ಅತೀವ ನೋವುಂಟು ಮಾಡಿದೆ. ಆ ಬಾಲಕಿಯ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ದುಃಖವನ್ನು ಭರಿಸುವ ಶಕ್ತಿಯನ್ನು ಆ ತಂದೆ ತಾಯಿಗೆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ. ತಪ್ಪು ಮಾಡಿದ ಅಪರಾಧಿಗೆ ಕಠಿಣ ಶಿಕ್ಷೆ ಆಗಲೇಬೇಕು ಹಾಗೂ ಆ ಪಾತಕಿಗೆ ಕ್ಷಮೆ ಎನ್ನುವುದೇ ಇರಬಾರದು. ಭವಿಷ್ಯದಲ್ಲಿ ಇಂಥ ನೀಚ ಘಟನೆಗಳು ಮರುಕಳಿಸದಂತೆ ಪೊಲೀಸರು ಕಟ್ಟೆಚ್ಚರ ವಹಿಸಬೇಕು ಎಂದು ಹೇಳಿದ್ರು. ಅತ್ಯಾಚಾರ ಎಸಗಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಾಗರೀಕ ಸಮಾಜ ತಲೆ ತಗ್ಗಿಸುವಂತಹ ಹೇಯ ಘಟನೆ. ಇಂಥ ಪಾತಕ ಕೃತ್ಯವನ್ನು ನಾನು ಖಂಡಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.