Webdunia - Bharat's app for daily news and videos

Install App

ಪಾತಕ ಕೃತ್ಯವನ್ನು ನಾನು ಖಂಡಿಸುತ್ತೇನೆ

Webdunia
ಗುರುವಾರ, 13 ಅಕ್ಟೋಬರ್ 2022 (18:50 IST)
ಟ್ಯೂಶನ್​​ಗೆ ಬಂದ 10 ವರ್ಷದ ವಿದ್ಯಾರ್ಥಿನಿಯನ್ನು ಟ್ಯೂಶನ್​​ ಸೆಂಟರ್​​ನಲ್ಲಿ ಉಸ್ತುವಾರಿ ನೋಡಿಕೊಳ್ಳುವ ವ್ಯಕ್ತಿಯೇ ಕೊಲೆ ಮಾಡಿ ಶವವನ್ನು ನಿರ್ಮಾಣ ಹಂತದ ಕಟ್ಟಡದ ನೀರಿನ ಪಂಪ್​​ನಲ್ಲಿ ಹಾಕಿದ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದಲ್ಲಿ ನಡೆದಿತ್ತು. ಈ ಸಂಬಂಧ ಟ್ವೀಟ್​​ ಮಾಡಿರುವ ಮಾಜಿ ಸಿಎಂ H.D. ಕುಮಾರಸ್ವಾಮಿ, ಹೆತ್ತ ಮಗುವನ್ನು ಕಳೆದುಕೊಂಡು ಶೋಕದಲ್ಲಿರುವ ಆ ಬಾಲಕಿಯ ಪೋಷಕರ ದುಃಖದಲ್ಲಿ ನಾನೂ ಭಾಗಿ. ನೂರುಕಾಲ ಬಾಳಿ ಬದುಕಬೇಕಿದ್ದ ಮಗುವಿನ ದುರ್ಮರಣ ನನಗೆ ಅತೀವ ನೋವುಂಟು ಮಾಡಿದೆ. ಆ ಬಾಲಕಿಯ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ದುಃಖವನ್ನು ಭರಿಸುವ ಶಕ್ತಿಯನ್ನು ಆ ತಂದೆ ತಾಯಿಗೆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ. ತಪ್ಪು ಮಾಡಿದ ಅಪರಾಧಿಗೆ ಕಠಿಣ ಶಿಕ್ಷೆ ಆಗಲೇಬೇಕು ಹಾಗೂ ಆ ಪಾತಕಿಗೆ ಕ್ಷಮೆ ಎನ್ನುವುದೇ ಇರಬಾರದು. ಭವಿಷ್ಯದಲ್ಲಿ ಇಂಥ ನೀಚ ಘಟನೆಗಳು ಮರುಕಳಿಸದಂತೆ ಪೊಲೀಸರು ಕಟ್ಟೆಚ್ಚರ ವಹಿಸಬೇಕು ಎಂದು ಹೇಳಿದ್ರು. ಅತ್ಯಾಚಾರ ಎಸಗಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಾಗರೀಕ ಸಮಾಜ ತಲೆ ತಗ್ಗಿಸುವಂತಹ ಹೇಯ ಘಟನೆ. ಇಂಥ ಪಾತಕ ಕೃತ್ಯವನ್ನು ನಾನು ಖಂಡಿಸುತ್ತೇನೆ ಎಂದು ಟ್ವೀಟ್​​ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments