Webdunia - Bharat's app for daily news and videos

Install App

ಕಪ್ಪು ಹಣ ಪ್ರಕರಣ: ಸಿಐಡಿಯಿಂದ ನೋಟಿಸ್ ಬಂದಿಲ್ಲ ಎಂದ ಶ್ರೀರಾಮುಲು

Webdunia
ಶುಕ್ರವಾರ, 23 ಡಿಸೆಂಬರ್ 2016 (18:29 IST)
ವಿಶೇಷ ಭೂಸ್ವಾಧೀನಾಧಿಕಾರಿ ಭೀಮಾನಾಯ್ಕ್ ಕಪ್ಪು ಹಣ ಬಿಳಿ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ನನಗೆ ಯಾವುದೇ ನೋಟಿಸ್ ಜಾರಿ ಮಾಡಿಲ್ಲ ಎಂದು ಸಂಸದ ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ. 
 
ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಗನ್‌ಮ್ಯಾನ್ ಚೆನ್ನಬಸವನನ್ನು ವಿಚಾರಣೆಗೊಳಪಡಿಸಿ ಕಳುಹಿಸಿದ್ದಾರಷ್ಟೇ. ಆದರೆ, ಸಿಐಡಿ ಅಧಿಕಾರಿಗಳು ನನಗೆ ಯಾವುದೇ ನೋಟಿಸ್ ಜಾರಿ ಮಾಡಿಲ್ಲ ಎಂದರು. 
 
ಈ ಪ್ರಕರಣದ ಕುರಿತು ನನಗೆ ಹೆಚ್ಚು ಮಾಹಿತಿ ಇಲ್ಲ. ಅಲ್ಲದೆ ಪ್ರಕರಣಕ್ಕೂ ನಮಗೂ ಯಾವುದೇ ಸಂಬಂಧ ಇರುವುದಿಲ್ಲ ಎಂದು ಹೇಳಿದರು. 
 
ಬಳ್ಳಾರಿ ಮಹಾನಗರ ಪಾಲಿಕೆಯಲ್ಲಿ ಸರ್ವಾಧಿಕಾರಿ ಧೋರಣೆ ನಡೆಯುತ್ತಿದೆ. ತಾವು ಹೇಳಿದ್ದೇ ನಡೆಯಬೇಕೆಂಬಂತೆ ಕಾಂಗ್ರೆಸ್‌ನವರು ವರ್ತಿಸುತ್ತಿದ್ದಾರೆ. ಸಭೆಯಲ್ಲಿ ಚರ್ಚೆ ಮಾಡಿದರು ಅವರು ಸ್ಪಂದಿಸುತ್ತಿಲ್ಲ. ಹೀಗಾಗಿ ಸಂಸದನಾದ ನಾನು ಪಾಲಿಕೆಗೆ ಹೋಗುವುದನ್ನೇ ಬಿಟ್ಟಿದ್ದೇನೆ ಎಂದು ಸಂಸದ ಶ್ರೀರಾಮುಲು ಬೇಸರ ವ್ಯಕ್ತಪಡಿಸಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತದ ಬಳಿಕ 80 ವಿಮಾನ ಹಾರಾಟಗಳ ರದ್ದು

ಕರುಣೆಯಿಲ್ಲದೆ ಯುದ್ಧ ಮುಂದುವರೆಯುತ್ತದೆ: ಟ್ರಂಪ್‌ ವಾರ್ನಿಂಗ್‌ಗೆ ಇರಾನ್‌ ಡೊಂಟ್ ಕ್ಯಾರೇ

ಲ್ಯಾಂಡ್ ಆದ ಬಳಿಕ ತಾಂತ್ರಿಕ ದೋಷದಿಂದ 40ನಿಮಿಷ ವಿಮಾನದೊಳಗೆ ಸಿಲುಕಿಕೊಂಡ ಇಂಡಿಗೋ ಪ್ರಯಾಣಿಕರು

Ahmedabad Plane Crash: 190 ಶವಗಳ ಗುರುತು ಪತ್ತೆ, 159 ಮಂದಿ ಮೃತದೇಹ ಕುಟುಂಬಕ್ಕೆ ಹಸ್ತಾಂತರ

ಮುಖ್ಯಮಂತ್ರಿ ಕುರ್ಚಿ ಆಸೆಯನ್ನು ಮತ್ತೆ ಪರೋಕ್ಷವಾಗಿ ಬಿಚ್ಚಿಟ್ಟ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

ಮುಂದಿನ ಸುದ್ದಿ
Show comments