Select Your Language

Notifications

webdunia
webdunia
webdunia
webdunia

ನನಗೆ ಯಾರ ವಿರುದ್ಧವೂ ದ್ವೇಷವಿಲ್ಲ: ಸುಭಾಷ್ ಬಿ.ಅಡಿ

ನನಗೆ ಯಾರ ವಿರುದ್ಧವೂ ದ್ವೇಷವಿಲ್ಲ: ಸುಭಾಷ್ ಬಿ.ಅಡಿ
ಬೆಂಗಳೂರು , ಮಂಗಳವಾರ, 30 ಜೂನ್ 2015 (16:56 IST)
ಒಂದು ಕೋಟಿ ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಉಪ ಲೋಕಾಯುಕ್ತ ಸುಭಾಷ್ ಬಿ.ಆಡಿ ಅವರು ಪ್ರತಿಕ್ರಿಯಿಸಿದ್ದು, ಪ್ರಕರಣ ಸಂಬಂಧ ಮುಖ್ಯ ಲೋಕಾಯುಕ್ತರು ನೀಡಿದ್ದ ತಡೆಯಾಜ್ಞೆಯನ್ನು ತೆರವುಗೊಳಿಸಿದ್ದು, ತನಿಖೆ ಮುಂದುವರಿಸಲು ಆದೇಶಿಸಿದ್ದೇನೆ ಎಂದಿದ್ದಾರೆ. 
 
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಕರಣದ ತನಿಖೆ ನಡೆಸದಂತೆ ರಾಜ್ಯದ ಮುಖ್ಯ ಲೋಕಾಯುಕ್ತರು ನಿನ್ನೆ ಆದೇಶಿಸಿ ತಡೆಯೊಡ್ಡಿದ್ದರು. ಆದರೆ ಆ ಆದೇಶವನ್ನು ತಿರಸ್ಕರಿಸಿ ತಾವೇ ಮರು ಆದೇಶ ನೀಡಿದ್ದು, ಬೆಂಗಳೂರು ನಗರ ಎಸ್‌ಪಿ ಸೋನಿಯಾ ನಾರಂಗ್ ನೇತೃತ್ವದಲ್ಲಿ ನಡೆಯುತ್ತಿದ್ದ ತನಿಖೆ ಪ್ರಗತಿಯನ್ನು ಮುಂದುವರಿಸುವಂತೆ ಆದೇಶಿಸಿದ್ದೇನೆ ಎಂದರು. 
 
ಇದೇ ವೇಳೆ, ತನಿಖೆಯು ಸೋನಿಯಾ ನಾರಂಗ್ ಅವರ ನೇತೃತ್ವದಲ್ಲಿಯೇ ಮುಂದುವರಿಯಲಿದೆ ಎಂದ ಅವರು, ನನಗೆ ಯಾರ ವಿರುದ್ಧವೂ ನನಗೆ ದ್ವೇಷವಿಲ್ಲ. ಆದರೆ ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ತನಿಖೆಗೆ ಆದೇಶಿಸಿದ್ದೇನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಕೆಲ ಅಂಕಿ-ಅಂಶಗಳು ದೊರಕಿದ್ದು, ತನಿಖೆ ಯಶಸ್ವಿಯಾಗಲಿದೆ ಎಂಬ ಭರವಸೆಯನ್ನು ವ್ಯಕ್ತಪಡಿಸಿದ ಅವರು, ರಾಜ್ಯ ಸರ್ಕಾರ ಎಸ್ಐಟಿ ರಚಿಸಿರುವ ಬಗ್ಗೆ ನನಗೆ ಅಧಿಕೃತ ಮಾಹಿತಿ ತಲುಪಿಲ್ಲ ಎಂದರು.
 
ಇನ್ನು ಇದೇ ಪ್ರಕರಣದಲ್ಲಿ ಲೋಕಾಯುಕ್ತರೇ ಭಾಗಿಯಾಗಿದ್ದಾರೆ ಎಂಬ ಆರೋಪ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆ ನಡೆಸುತ್ತಿದ್ದ ಲೋಕಾಯುಕ್ತ ಪೊಲೀಸರಿಗೆ ತನಿಖೆ ನಿಲ್ಲಿಸುವಂತೆ ರಾಜ್ಯದ ಮುಖ್ಯ ಲೋಕಾಯುಕ್ತ ನ್ಯಾ.ವೈ.ಭಾಸ್ಕರ್ ರಾವ್ ಅವರು ತಡೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಉಪ ಲೋಕಾಯುಕ್ತರು ತನಿಖೆ ಮುಂದುವರಿಸುವಂತೆ ಆದೇಶಿಸಿದ್ದಾರೆ. 
 
ಪ್ರಕರಣದಲ್ಲಿ ಲೋಕಾಯುಕ್ತ ಇಲಾಖೆಯ ಜಂಟಿ ಆಯುಕ್ತ ರಿಯಾಜ್, ಲೋಕಾಯುಕ್ತ ನ್ಯಾ.ವೈ.ಭಾಸ್ಕರ್ ರಾವ್ ಅವರ ಪುತ್ರ ಅಶ್ವಿನ್ ರಾವ್ ಹಾಗೂ ಅವರ ಸಂಬಂಧಿ ಆಂಧ್ರ ಮೂಲದ ಕೃಷ್ಣ ರಾವ್ ಅಲಿಯಾಸ್ ನರಸಿಂಹ ರಾವ್ ಅವರು ಭಾಗಿಯಾಗಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ. 

Share this Story:

Follow Webdunia kannada