ಅವರು ಕಾಂಗ್ರೆಸ್‌ ಕಾರ್ಯಕರ್ತರೋ ಅಲ್ಲವೋ ಗೊತ್ತಿಲ್ಲ – ಜಿ. ಪರಮೇಶ್ವರ್‌

geetha
ಮಂಗಳವಾರ, 5 ಮಾರ್ಚ್ 2024 (15:00 IST)
ಬೆಂಗಳೂರು : ಬಿಜೆಪಿಯವರು ಹೇಳಿದಂತೆ ಎಲ್ಲವನ್ನೂ ಮಾಡಲಿಕ್ಕೆ ಸಾಧ್ಯವಿಲ್ಲ. ನಮಗೆ ಕಾನೂನಿದೆ. ಈ ನೆಲದ ಕಾನೂನಿಗೆ ತಕ್ಕಂತೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ನುಡಿದ ಜಿ. ಪರಮೇಶ್ವರ್‌, ಎಫ್‌ಎಸ್‌ಎಲ್‌ ರಿಪೋರ್ಟ್‌ ನ್ನು ಉದ್ದೇಶಪೂರ್ವಕವಾಗಿಯೇ ನಾವು ಬಹಿರಂಗಪಡಿಸಿಲ್ಲ. ಇನ್ನೂ ಹಲವು ತನಿಖಾ ವರದಿಗಳು ಬರಬೇಕಿದೆ. ಬಂದ ನಂತರ ಅವುಗಳ ಪ್ರಕಾರ ತನಿಖೆ ಮುಂದುವರೆಯಲಿದೆ ಎಂದು ಜಿ. ಪರಮೇಶ್ವರ್‌ ಹೇಳಿದರು.
 
ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಆರೋಪಿಗಳು ಕಾಂಗ್ರೆಸ್‌ ಕಾರ್ಯಕರ್ತರೋ, ಕಾಂಗ್ರೆಸ್‌ ಮೇಲೆ ಅನುಕಂಪ ಹೊಂದಿರುವವರೋ ಅಥವಾ ಕಾಂಗ್ರೆಸ್‌ ಕಚೇರಿ ಕೆಲಸಗಾರರೋ ನನಗೆ ಗೊತ್ತಿಲ್ಲ ಎಂದು ಗೃಹಸಚಿವ ಜಿ. ಪರಮೇಶ್ವರ್‌ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪೊಲೀಸರು ಆರೋಪಿಗಳನ್ನು ವಶಕ್ಕೆ‌ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಅವರಿಂದಲೇ ಸತ್ಯ ಹೊರಬರಲಿದೆ ಎಂದರು.

ರಾಮೇಶ್ವರಂ ಸ್ಫೋಟ ಪ್ರಕರಣದಲ್ಲಿ ಎನ್‌ಐಎ ಇಂದಿನಿಂದ ತನಿಖೆ ಪ್ರಾರಂಭಿಸಿದೆ. ಇದು ರಾಷ್ಟ್ರೀಯ ಸುರಕ್ಷತೆಯ ವಿಷಯವಾದ್ದರಿಂದ ತನಿಖೆಯನ್ನು ಎನ್‌ಐಎ ನಡೆಸುತ್ತಿದೆ ಎಂದು ಜಿ. ಪರಮೇಶ್ವರ್‌ ಹೇಳಿದರು. 
 
 

 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವೆಂಬರ್ ಕ್ರಾಂತಿ ಬಗ್ಗೆ ದೆಹಲಿಯಲ್ಲಿ ಸ್ಫೋಟಕ ಹೇಳಿಕೆ ಕೊಟ್ಟ ಡಿಕೆ ಶಿವಕುಮಾರ್‌

ಜಾಗ ಸರ್ವೇಗೆ ಬಂದ ಅಧಿಕಾರಿಗಳ ಎದುರು ದೈವ ಮೈಮೇಲೆ ಬಂದ ಹಾಗೇ ವರ್ತಿಸಿದ ವ್ಯಕ್ತಿ

ಸಂಕಷ್ಟದಲ್ಲಿರುವ ರೈತರಿಗೆ ಬಿಡಿಗಾಸನ್ನೂ ನೀಡದ ಸಿದ್ದರಾಮಯ್ಯರ ಸರಕಾರ: ಬಿ.ವೈ.ವಿಜಯೇಂದ್ರ

ಸಿದ್ದರಾಮಯ್ಯ ಬೆಲೆಯೇರಿಕೆಯ ಬಾದ್ ಷಾ: ಬಿಜೆಪಿ ಕಟು ಟೀಕೆ

ಜನಮಗಣಮನ ಗೀತೆ ರಚಿಸಿದ್ದು ಬ್ರಿಟಿಷರಿಗಾಗಿ ಎಂದ ವಿಶ್ವೇಶ್ವರ ಹೆಗಡೆ ಕಾಗೇರಿ: ಆರ್ ಎಸ್ಎಸ್ ಪ್ರಭಾವವೆಂದ ಪ್ರಿಯಾಂಕ್ ಖರ್ಗೆ

ಮುಂದಿನ ಸುದ್ದಿ
Show comments