ಬೆಂಗಳೂರು : ನಾನು ಯಾರಿಗೂ ಪ್ರಮಾಣ ಮಾಡಬೇಕಾದ ಅವಶ್ಯಕತೆ ಇಲ್ಲ. ಕೆಲಸ ಮಾಡಿದ್ರೆ ಹಣ ಬಿಡುಗಡೆ ಆಗುತ್ತೆ, ಇಲ್ಲ ಅಂದ್ರೆ ಹಣ ಇಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಖಡಕ್ ಹೇಳಿಕೆ ಕೊಟ್ಟಿದ್ದಾರೆ.
ಬೆಂಗಳೂರಿನ ಕಾಂಗ್ರೆಸ್ ಶಾಸಕರ ಸಭೆಯ ಬಳಿಕ ಮಾತನಾಡಿದ ಅವರು, ಬೆಂಗಳೂರು ಶಾಸಕರು ನಾಳೆ ಎಲ್ಲರೂ ಸಿಎಂನ ಭೇಟಿ ಮಾಡಲಿದ್ದಾರೆ. ಹಿಂದೆ ಆದ ತಾರತಮ್ಯ ಚರ್ಚೆ ಮಾಡ್ತೀವಿ. ಹಣಕಾಸು ವಿಚಾರದ ಬಗ್ಗೆ ಚರ್ಚೆಯಾಗಲಿದೆ. ಕ್ಷೇತ್ರದ ವಿಚಾರ ಚರ್ಚೆ ಮಾಡ್ತೀವಿ ಅಂತಾ ಹೇಳಿದ್ದಾರೆ.
ಕಂಟ್ರ್ಯಾಕ್ಟರ್ಗಳು ಆಣೆ ಪ್ರಮಾಣಕ್ಕೆ ಬರಲಿ ಎಂದ ವಿಚಾರಕ್ಕೆ ಪ್ರತಿಕ್ರಿಯಿಸಿ, ನಾನು ಯಾವ ಗುತ್ತಿಗೆದಾರನಿಗೂ ಉತ್ತರ ಕೊಡಲ್ಲ. ಯಾವ ಬಿಲ್ ವಿಚಾರವೂ ಗೊತ್ತಿಲ್ಲ. ನನಗೂ ಪ್ರಜ್ಞೆ ಇದೆ, ರಾಜಕಾರಣ ಗೊತ್ತಿದೆ.