ಇಂದು ಮಧ್ಯ ರಾತ್ರಿ ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ನಡೆಯಲಿರುವ ಜಿಎಸ್‌ಟಿ ಕಾರ್ಯಕ್ರಮಕ್ಕೆ ವಿಪಕ್ಷಗಳು ಯಾಕೆ ಬಹಿಷ್ಕರಿಸಿವೆ ಎನ್ನುವುದು ಗೊತ್ತಿಲ್ಲ ಎಂದು ಮಾಜಿ ಪ್ರಧಾನಿ ದೇವೇಗೌಡರು ಹೇಳಿದ್ದಾರೆ.
ಪ್ರಧಾನಿ ಸೂಚನೆ ಮೇರೆಗೆ ಕೇಂದ್ರ ಸಚಿವ ಅನಂತ್ ಕುಮಾರ್ ನಮ್ಮ ಮನೆಗೆ ಬಂದು ಆಹ್ವಾನ ನೀಡಿದ್ದಾರೆ. ರಾಷ್ಟ್ರಪತಿ ಉಪರಾಷ್ಟ್ರಪತಿಗಳು ಜಿಎಸ್‌ಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದರು.
ಮಾಜಿ ಪ್ರಧಾನಿಯಾಗಿ ರಾಷ್ಟ್ರಪತಿ, ಉಪರಾಷ್ಟ್ರಪತಿಗಳು ಉಪಸ್ಥಿತರಿರುವ ಕಾರ್ಯಕ್ರಮಕ್ಕೆ ಗೈರುಹಾಜರಾಗುವುದು ಸರಿಯಲ್ಲ. ಕಾರ್ಯಕ್ರಮ ಬಹಿಷ್ಕರಿಸಿರುವ ಕುರಿತಂತೆ ಯಾರೊಬ್ಬರು ನನ್ನೊಂದಿಗೆ ಚರ್ಚಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಮೊದಲು ಕಾರ್ಯಕ್ರಮಕ್ಕೆ ಹಾಜರಾಗುವುದಾಗಿ ಒಪ್ಪಿಗೆ ನೀಡಿ, ಇದೀಗ ಬಹಿಷ್ಕರಿಸುವುದು ನನಗೆ ಶೋಭೆ ತರುವುದಿಲ್ಲ ಎಂದು ಮಾಜಿ ಪ್ರಧಾನಿ ದೇವೇಗೌಡರು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.