ವಿಕಾಸಸೌಧದಲ್ಲಿ ಅಧಿಕಾರಿಗಳೊಂದಿಗೆ ಸಭೆಯಲ್ಲಿ ಪಾಲ್ಗೊಂಡಿದ್ದರಿಂದ ಸಚಿವ ತನ್ವೀರ್ ಸೇಠ್ ಅವರ ಮಾಹಿತಿ ನನಗೆ ದೊರೆತಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ಸಚಿವ ತನ್ವೀರ್ ಸೇಠ್ ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ಸಂದರ್ಭದಲ್ಲಿ ಪೋಲಿ ಚಿತ್ರಗಳ ವೀಕ್ಷಣೆ ಮಾಡಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ. ತನ್ವೀರ್ ಸೇಠ್ ಅವರನ್ನು ಕರೆದು ಮಾತನಾಡಿ ಚರ್ಚಿಸುತ್ತೇನೆ ಎಂದು ತಿಳಿಸಿದ್ದಾರೆ.
ಒಂದು ವೇಳೆ, ತನ್ವೀರ್ ಸೇಠ್ ಅಂತಹ ತಪ್ಪು ಮಾಡಿರುವುದು ವರದಿಯಲ್ಲಿ ಬಹಿರಂಗವಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ಅಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡಿದ್ದರಿಂದ ಮಾಹಿತಿ ಗೊತ್ತಾಗಿಲ್ಲ. ಗೃಹ ಸಚಿವನಾಗಿ ಟಿವಿ ನೋಡುತ್ತಾ ಕುಳಿತಿರಲಿಲ್ಲ. ಸುದ್ದಿಗಾರರಿಂದ ನನಗೆ ಮಾಹಿತಿ ಲಭಿಸಿದೆ. ತಪ್ಪು ಯಾರು ಮಾಡಿದರೂ ತಪ್ಪೆ. ಅದರಲ್ಲೇನು ಅನುಮಾನ ಬೇಡ ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ