ಬೆಂಗಳೂರು: ಬಿಜೆಪಿ ಪಕ್ಷದಲ್ಲಿ ಅಧ್ಯಕ್ಷರ ವಿಚಾರವಾಗಿ ವೈಮನಸ್ಸು ಮೂಡಿದ್ದು, ಈ ವಿಚಾರವಾಗಿ ಶಾಸಕ ಬಸನಗೌಡ ಯತ್ನಾಳ್ ಅವರು ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಮಾತ್ರವಲ್ಲ, ರಾಜ್ಯದ ಮುಖ್ಯಮಂತ್ರಿ ಆಗುವ ಎಲ್ಲ ಅರ್ಹತೆ ನನಗೆ ಇದೆ ಎಂದು ಯತ್ನಾಳ್ ಮತ್ತೊಂದು ಹೊಸ ಬಾಂಬ್ ಸಿಡಿಸಿದ್ದಾರೆ. ಈ ಮುಳಕ ಮುಂದಿನ ದಿನಗಳಲ್ಲಿ ಸಿಎಂ ಆಗುವ ಹಂಬಲವನ್ನು ವ್ಯಕ್ತಪಡಿಸಿದ್ದಾರೆ.
ಕರ್ನಾಟಕವನ್ನ ಭ್ರಷ್ಟಾಚಾರದಿಂದ ಮುಕ್ತಗೊಳಿಸುವ ಪ್ರಯತ್ನ ಮಾಡುತ್ತಿದ್ದೇವೆ. ಅಲ್ಲದೆ ಕುಟುಂಬ ರಾಜಕಾರಣ ಹಾಗೂ ಭ್ರಷ್ಟಾಚಾರದ ವಿರುದ್ಧ ನಮ್ಮ ಹೋರಾಟ ಮುಂದುವರಿಯಲಿದೆ. ಇದೇ ವಿಚಾರವಾಗಿ ನಮ್ಮ ಪ್ರಯತ್ನ ನಡೆಯುತ್ತಿದೆ ಎಂದಿದ್ದಾರೆ. ಅಲ್ಲದೆ ಯತ್ನಾಳ್ ಅವರು ಮತ್ತೆ ದೆಹಲಿಗೆ ಹೋಗುತ್ತಿರುವುದಾಗಿ ಹೇಳಿದ್ದಾರೆ.
ಪಕ್ಷದಲ್ಲಿ ಮೂಡಿರುವ ಒಡಕನ್ನು ಸರಿಮಾಡಬೇಕಿದೆ. ಇನ್ನು ಶ್ರೀರಾಮುಲು ಅವರ ಯಾತ್ರೆ ನಿರ್ಧಾರ ಸ್ವಾಗತಾರ್ಹ ಎಂದೂ ಹೇಳಿದ್ದಾರೆ.