ಮುಂಬೈ: ಭವಿಷ್ಯದಲ್ಲಿ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವ ಉದ್ದೇಶವಿಲ್ಲ ಎಂದು ಹೇಳುವ ಮೂಲಕ ಎನ್‌ಸಿಪಿ, ಎಸ್‌ಪಿ ಮುಖ್ಯಸ್ಥ ಶರದ್ ಪವಾರ್ ಅವರು ರಾಜಕೀಯ ನಿವೃತ್ತಿಯ ಬಗ್ಗೆ ಪರೋಕ್ಷ ಸುಳಿವು ನೀಡಿದ್ದಾರೆ.
ಮೊಮ್ಮಗ ಯುಗೇಂದರ ಪವಾರ್ ಪರ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿ, ಮಾತನಾಡುವ ವೇಳೆ ರಾಜ್ಯಸಭಾ ಅಧಿಕಾರಾವಧಿ ಮುಗಿದ ನಂತರ ಸಂಸದೀಯ ಸ್ಥಾನದಲ್ಲಿ ಉಳಿಯಬೇಕೇ? ಬೇಡವೇ? ಎನ್ನುವುದರ ಬಗ್ಗೆ ಯೋಚಿಸುತ್ತೇನೆ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ನಾನು ಅಧಿಕಾರದಲ್ಲಿ ಇಲ್ಲ, ರಾಜ್ಯಸಭೆಯಲ್ಲಿ ಇದ್ದೇನೆ. ರಾಜ್ಯಸಭಾ ಅಧಿಕಾರಾವಧಿ ಇನ್ನು ಒಂದೂವರೆ ವರ್ಷ ಬಾಕಿ ಇದೆ. ಇದುವರೆಗೆ ನಾನು 14 ಚುನಾವಣೆಯಲ್ಲಿ ಸ್ಪರ್ಧಿಸಿದ್ದೇನೆ. ಇನ್ನು ಎಷ್ಟು ಚುನಾವಣೆಯಲ್ಲಿ ಸ್ಪರ್ಧಿಸಲಿ? ಹೊಸ ಪೀಳಿಗೆಗೆ ಅವಕಾಶ ನೀಡಬೇಕಿದೆ ಎಂದು ಹೇಳಿದರು.
ಅಧಿಕಾರ ತೊರೆದರು ಜನಸೇವೆ ಮಾಡುವುದನ್ನು ನಾನು ಬಿಡುವುದಿಲ್ಲ. ಸಾಮಾಜಿಕ ಸೇವೆಗೆ ಚುನಾವಣೆಯ ಅಗತ್ಯವಿಲ್ಲ ಎಂದರು.