ರಾಜ್ಯದಲಿ ವಿದ್ಯುತ್ ಕೊರತೆಯಾಗಿದೆ ಈಗ 2 ಸಾವಿರದಿಂದ 3 ಸಾವಿರ ಮೆಗಾವ್ಯಾಟ್ ವಿದ್ಯುತ್ ಕೊರತೆ ಇದೆ. ಇದಕ್ಕೆ ಕಾರಣ ಬಿಜೆಪಿ ಸರ್ಕಾರದಲ್ಲಿ ಹಾಗೂ ಕುಮಾರಸ್ವಾಮಿ ಸರ್ಕಾರದಲ್ಲಿ ವಿದ್ಯುತ್ ಉತ್ಪಾದನಯೇ ನಡೆಯಲಿಲ್ಲ. ಹೀಗಾಗಿ ವಿದ್ಯುತ್ ಸಮಸ್ಯೆ ಎದುರಾಗಿದೆ. ಹೊರಗಡೆ ವಿದ್ಯುತ್ ಖರೀದಿ ಮಾಡಲು ಕೂಡ ನಾನು ಸೂಚನೆ ಕೊಟ್ಟಿದ್ದೇನೆ. ಸಕ್ಕರೆ ಕಾರ್ಖಾನೆಯಿಂದ ವಿದ್ಯುತ್ ಉತ್ಪಾದನೆ ಹೆಚ್ಚು ಮಾಡಲು ಕೂಡಾ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಂಯ್ಯ ತಿಳಿಸಿದ್ದಾರೆ.