ಹುಬ್ಬಳ್ಳಿ : ವಿಶ್ವದ ಅತೀ ಉದ್ಧದ ರೈಲ್ವೆ ಪ್ಲಾಟ್ ಫಾರ್ಮ್ ಹೊಂದಿರುವ ಕೀರ್ತಿ ಹುಬ್ಬಳ್ಳಿ ರೈಲ್ವೆ ನಿಲ್ದಾಣಕ್ಕಿದೆ.
ದ್ವಿತೀಯ ದರ್ಜೆ ನಗರದಲ್ಲಿ ಮೂರನೇ ದ್ವಾರ ಇರುವುದು ಕೇವಲ ಹುಬ್ಬಳ್ಳಿಯಲ್ಲಿ ಮಾತ್ರ ಅಂತ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹರ್ಷ ವ್ಯಕ್ತಪಡಿಸಿದ್ದಾರೆ.
ರೈಲ್ವೆ ನಿಲ್ದಾಣದ ಮೂರನೇ ಮುಖ್ಯ ದ್ವಾರಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ಮೂರನೇ ಮುಖ್ಯ ದ್ವಾರ ಉದ್ಘಾಟನೆ ಆಗುತ್ತಿರುವುದು ನಮಗೆ ಬಹಳ ಸಂತೋಷವಾಗಿದೆ.
ದಿವಂಗತ ರೈಲ್ವೆ ಸಚಿವ ಸುರೇಶ್ ಅಂಗಡಿಯವರ ಪರಿಶ್ರಮದಿಂದ ರೈಲ್ವೆ ನಿಲ್ದಾಣಕ್ಕೆ ಸಿದ್ದಾರೂಢರ ಹೆಸರನ್ನು ಇಡಲಾಗಿದೆ ಎಂದು ತಿಳಿಸಿದ್ದಾರೆ.