Publish Date: Tue, 22 Oct 2019 (10:34 IST)
Updated Date: Tue, 22 Oct 2019 (10:37 IST)
ಯಾದಗಿರಿ : ಸಿಎಂ ಯಡಿಯೂರಪ್ಪ ಅವರಿಂದ ನನಗೆ ಜೀವಬೆದರಿಕೆ ಇದೆ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಮಹಾ ಪ್ರಧಾನ ಕಾರ್ಯದರ್ಶಿ ಶರಣ್ ಗೌಡ ಗಂಭೀರ ಆರೋಪ ಮಾಡಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆಪರೇಷನ್ ಕಮಲ ಆಡಿಯೋ ಬಹಿರಂಗಪಡಿಸಿದ್ದಕ್ಕೆ ಸಿಎಂ ಯಡಿಯೂರಪ್ಪ ಅವರು ನನ್ನ ಮೇಲೆ ಹಗೆ ಸಾಧಿಸಿಕೊಳ್ಳುತ್ತಿದ್ದಾರೆ. ಅಲ್ಲದೇ ನನ್ನ ಮೇಲೆ ಸುಳ್ಳು ಕೇಸನ್ನು ದಾಖಲಿಸಲು ಪೊಲೀಸ್ ಅಧಿಕಾರಿಗಳನ್ನು ಬಳಸಿಕೊಂಡು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ನನ್ನ ಹಿಂದೆ ಅಪರಿಚಿತ ವ್ಯಕ್ತಿಗಳನ್ನು ಬಿಟ್ಟಿದ್ದಾರೆ. ಮುಸುಕುಧಾರಿ ವ್ಯಕ್ತಿಗಳು ನನ್ನನ್ನು ಫಾಲೋ ಮಾಡುತ್ತಿದ್ದಾರೆ. ಅಲ್ಲದೇ ಇತ್ತೀಚೆಗೆ ನನ್ನ ಫೋನ್ ಕೂಡ ಟ್ಯಾಪ್ ಮಾಡಲಾಗಿದೆ ಎಂದು ಸಿಎಂ ಮೇಲೆ ಆರೋಪ ಮಾಡಿದ್ದಾರೆ.