Select Your Language

Notifications

webdunia
webdunia
webdunia
webdunia

ಎಸ್‌.ಎಂ.ಕೃಷ್ಣ ಬಿಜೆಪಿ ಸೇರ್ಪಡೆ ಮಾಹಿತಿಯಿಲ್ಲ: ಜಿ.ಪರಮೇಶ್ವರ್

ಎಸ್‌.ಎಂ.ಕೃಷ್ಣ ಬಿಜೆಪಿ ಸೇರ್ಪಡೆ ಮಾಹಿತಿಯಿಲ್ಲ: ಜಿ.ಪರಮೇಶ್ವರ್
ಕೊಪ್ಪಳ್ಳ , ಬುಧವಾರ, 1 ಫೆಬ್ರವರಿ 2017 (15:49 IST)
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಕಾಂಗ್ರೆಸ್ ತೊರೆದಿದ್ದರಿಂದ ಸಹಜವಾಗಿಯೇ ಪಕ್ಷಕ್ಕೆ ನಷ್ಟವಾಗಿದೆ. ಆದರೆ, ಅವರು ಬಿಜೆಪಿ ಪಕ್ಷ ಸೇರುತ್ತಾರೆ ಎನ್ನುವ ಕುರಿತು ಯಾವುದೇ ಮಾಹಿತಿ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
 
ಕೊಪ್ಪಳ್ಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ತೊರೆಯದಂತೆ ಕೃಷ್ಣ ಅವರ ಮನವೊಲಿಸಲು ಸಾಕಷ್ಟು ಪ್ರಯತ್ನಿಸಿದ್ದೇವೆ. ಆದರೆ, ಅವರು ಪಕ್ಷ ಬಿಟ್ಟಿದ್ದಾರೆ. ಈ ಮಧ್ಯ ನಾವು ಮುಂಬರುವ ವಿಧಾನಸಭೆ ಚುನಾವಣೆ ಎದುರಿಸಲು ಸಿದ್ಧರಾಗಬೇಕಿದೆ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು. 
 
ಸಾಮೂಹಿಕ ನಾಯಕತ್ವದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಎದುರಿಸುತ್ತೇವೆ. 2018 ರಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತವೆಂದು ವಿಶ್ವಾಸ ವ್ಯಕ್ತಪಡಿಸಿದರು. 
 
ಹಿರಿಯ ಕಾಂಗ್ರೆಸ್ ಮುಖಂಡ ಜಾಫರ್ ಷರೀಷ್ ಅವರು ರಾಜ್ಯ ಸರಕಾರವನ್ನು ಕುರುಬರ ಸರಕಾರ ಎಂದು ಆರೋಪಿಸಿರುವುದು ಅವರ ವೈಯಕ್ತಿಕ ಅಭಿಪ್ರಾಯ. ಈ ಕುರಿತು ನಾನು ಯಾವುದೇ ಪ್ರತಿಕ್ರಿಯೆ ನೀಡಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹೇಳಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಬಜೆಟ್ 2017: ಯಾವುದು ದುಬಾರಿ, ಯಾವುದು ಅಗ್ಗ?