ಬಿ.ಎಸ್.ಯಡಿಯೂರಪ್ಪ ಅವರಲ್ಲಿ ನನಗೆ ಪ್ರೀತಿಯೂ ಇಲ್ಲ, ದ್ವೇಷವೂ ಇಲ್ಲ: ಸಿದ್ದರಾಮಯ್ಯ

Webdunia
ಸೋಮವಾರ, 11 ಅಕ್ಟೋಬರ್ 2021 (14:30 IST)
ಬೆಂಗಳೂರು : ಬಿ.ಎಸ್.ಯಡಿಯೂರಪ್ಪ ಅವರ ಮೇಲೆ ನನಗೆ ಪ್ರೀತಿಯೂ ಇಲ್ಲ ದ್ವೇಷವೂ ಇಲ್ಲ. ನಾನು ರಾಷ್ಟ್ರ ರಾಜಕಾರಣಕ್ಕೆ ತೆರಳುವ ಬಗ್ಗೆ ನನ್ನ, ಸೋನಿಯಾ ಗಾಂಧಿಯ ನಡುವೆ ಆ ಚರ್ಚೆ ಆಗಿಲ್ಲ. ಜತೆಗೆ ನನಗೆ ರಾಷ್ಟ್ರ ರಾಜಕಾರಣದಲ್ಲಿ ಯಾವುದೇ ಆಸಕ್ತಿಯೂ ಇಲ್ಲ ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದರು.

ಬೆಂಗಳೂರು ನಗರ ಉಸ್ತುವಾರಿಗಾಗಿ ಕಿತ್ತಾಟ ಶುರುವಾಗಿದೆ.ಇವರಿಗೆ ಬೇರೆ ಲಾಭ ಇದೆ ಹೀಗಾಗಿ ಪೈಪೋಟಿ ಬೀಳುತ್ತಾರೆ. ರಸ್ತೆಗುಂಡಿಗೆ ಬಿದ್ದು ಅಹಿತಕರ ಘಟನೆಗಳು ನಡೆಯುತ್ತಿವೆ. ಆ ಸಮಸ್ಯೆ ಬಗೆಹರಿಸುವ ಬಗ್ಗೆ ಸರ್ಕಾರಕ್ಕೆ ಕಾಳಜಿಯಿಲ್ಲ. ಆದರೆ ತಾವು ದೇಶಭಕ್ತರು ಎಂದು ಹೇಳಿಕೊಳ್ಳುತ್ತಾರೆ ಎಂದು ಅವರು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಾಷ್ಟ್ರ ರಾಜಕಾರಣದಲ್ಲಿ ತೊಡಗಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಆಹ್ವಾನ ನೀಡಿದ್ದರು. ಆದರೆ, ಸಿದ್ದರಾಮಯ್ಯ ಮಾತ್ರ ರಾಜ್ಯ ರಾಜಕಾರಣದಲ್ಲಿ ಮುಂದುವರೆಯುವುದಾಗಿ ಸ್ಪಷ್ಟನೆ ನೀಡಿದ್ದು ಕುತೂಹಲ ಮೂಡಿಸಿತ್ತು. ಇದೀಗ ಕಾಂಗ್ರೆಸ್  ರಾಷ್ಟ್ರೀಯ ಅಧ್ಯಕ್ಷ ಸ್ಥಾನದ ವಿಚಾರದಲ್ಲಿ ರಾಹುಲ್ ಗಾಂಧಿ ಪರ ಬ್ಯಾಟಿಂಗ್ ಮಾಡಿರುವ ಸಿದ್ದರಾಮಯ್ಯ ರಾಹುಲ್ ಗಾಂಧಿ ಅವರೇ ಕಾಂಗ್ರೆಸ್ ಅಧ್ಯಕ್ಷರಾಗಬೇಕೆಂಬುದು ನಮ್ಮ ಪಕ್ಷದ ಎಲ್ಲರ ಆಸೆ ಎಂದಿದ್ದಾರೆ. ಹಾಗೇ, ಕರ್ನಾಟಕದಲ್ಲಿ ಬಿಜೆಪಿಯ ವಾಸ್ತವ ಸ್ಥಿತಿ, ಜೆಡಿಎಸ್ ಕುಟುಂಬ ರಾಜಕಾರಣ, ಡಿಕೆ ಶಿವಕುಮಾರ್ ಮತ್ತು ತಮ್ಮ ನಡುವಿನ ಸಂಬಂಧದ ಬಗ್ಗೆಯೂ ಮಾತನಾಡಿದ್ದಾರೆ.
2023ರ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿರುವ ಸಿದ್ದರಾಮಯ್ಯ ದೆಹಲಿಗೆ ತೆರಳಿ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ಈ ವೇಳೆ ಸಂಡೆ ಗಾರ್ಡಿಯನ್ಗೆ ಸಂದರ್ಶನ ನೀಡಿರುವ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ಬಿಎಸ್ ಯಡಿಯೂರಪ್ಪ ಅವರ ರಾಜೀನಾಮೆ, ಕರ್ನಾಟಕದ ರಾಜಕಾರಣ ಮುಂತಾದ ವಿಷಯಗಳ ಬಗ್ಗೆ ಮಾತನಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಆಪರೇಷನ್ ಸಾಗರ್ ಬಂಧು ಆರಂಭಿಸಿದ ಭಾರತ

ರಾಜ್ಯದ ಎಲ್ಲ ಸಮಸ್ಯೆಗೆ ನಾಟಿಕೋಳಿಯಲ್ಲಿ ಪರಿಹಾರವಿದೆಯೇ: ಎನ್.ರವಿಕುಮಾರ್ ಪ್ರಶ್ನೆ

ಶ್ರೀಲಂಕಾಗೆ ಸಹಾಯ ಮಾಡಲು ಹೋಗಿ ಮುಜುಗರಕ್ಕೀಡಾದ ಪಾಕಿಸ್ತಾನ, ಆಗಿದ್ದೇನು ಗೊತ್ತಾ

ಎರಡು ರಾತ್ರಿ ತೋಟದಲ್ಲೇ ಕಳೆದ ಮಗು, ಕೊನೆಗೂ ಹುಡುಕಿಕೊಟ್ಟ ಸಾಕು ನಾಯಿ

ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ, ದೆಹಲಿಗೆ ಆಗಮಿಸಿದ ರಷ್ಯಾದ ವಿಶೇಷ ಭದ್ರತಾ ಪಡೆ

ಮುಂದಿನ ಸುದ್ದಿ
Show comments