Webdunia - Bharat's app for daily news and videos

Install App

ಕಾಂಗ್ರೆಸಿಗರನ್ನು ಸನ್ನಿಲಿಯೋನ್‌‌‌‌‌‌ಗೆ ಹೋಲಿಸಿಲ್ಲ: ಉಲ್ಟಾ ಹೊಡೆದ ಜಗ್ಗೇಶ್

Webdunia
ಶನಿವಾರ, 5 ಸೆಪ್ಟಂಬರ್ 2015 (14:31 IST)
ನಿನ್ನೆ ಬಿಜೆಪಿ ಪಕ್ಷದ ವತಿಯಿಂದ ನಗರದ ಟೌನ್ ಹಾಲ್‌ನಲ್ಲಿ ನಡೆಸಲಾಗುತ್ತಿದ್ದ ಪ್ರತಿಭಟನೆ ವೇಳೆ ನಟ, ಬಿಜೆಪಿ ವಿಧಾನ ಪರಿಷತ್ ಸದಸ್ಯ ಜಗ್ಗೇಶ್ ಅವರು ಕಾಂಗ್ರೆಸ್ ಕಾರ್ಯಕರ್ತರನ್ನು ಸನ್ನಿಲಿಯೋನ್ ಅಭಿಮಾನಿಗಳಿಗೆ ಹೋಲಿಸಿ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಯುವ ಕಾರ್ಯಕರ್ತರು ನಗರದ ಮಲ್ಲೇಶ್ವರಂನಲ್ಲಿರುವ ಜಗ್ಗೇಶ್ ನಿವಾಸಕ್ಕೆ ಇಂದು ಮುತ್ತಿಗೆ ಹಾಕಿದ್ದು, ಪ್ರತಿಭಟನೆ ನಡೆಸುತ್ತಿದ್ದಾರೆ. 
 
ನಿವಾಸದ ಎದುರು ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ಯುವ ಕಾರ್ಯಕರ್ತರು, ಬೆತ್ತಲೆ ಸಂಸ್ಕೃತಿಯ ನಾಯಕ ಹಾಗೂ ಸನ್ನಿ ಲಿಯೋನ್ ಅಭಿಮಾನಿ ಜಗ್ಗೇಶ್‌ಗೆ ಧಿಕ್ಕಾರ ಧಿಕ್ಕಾರ ಎಂಬ ಘೋಷಣೆಗಳನ್ನು ಕೂಗುತ್ತಿದ್ದಾರೆ. ಪ್ರತಿಭಟನೆ ವೇಳೆ ನಿವಾಸಕ್ಕೆ ಮುತ್ತಿಗೆ ಹಾಕಿದ ಹಿನ್ನೆಲೆಯಲ್ಲಿ ಸುಮಾರು 50ಕ್ಕೂ ಅಧಿಕ ಕಾರ್ಯಕರ್ತರನ್ನು ಬಂಧಿಸಿ ಬಿಡುಗಡೆಗೊಳಿಸಿದರು. 
 
ಪ್ರತಿಭಟನೆ ಹಿನ್ನೆಲೆಯಲ್ಲಿ ಜಗ್ಗೇಶ್ ಹೇಳಿಕೆ ನೀಡಿದ್ದು, ನಮ್ಮ ರಾಷ್ಟ್ರದಲ್ಲಿ ಯಾರೇ ಆಧರೂ ಕೂಡ ಅವರದ್ದೇ ಆದ ಅಭಿಮಾನಿ ಬಳಗವನ್ನು ಹೊಂದಿರುತ್ತಾರೆ ಎಂಬ ಅರ್ಥದಲ್ಲಿ ಸನ್ನಿಲಿಯೋನ್ ಗೆ ಇದ್ದಂತೆ ಕಾಂಗ್ರೆಸ್ ಗೂ ಅಭಿಮಾನಿಗಳಿದ್ದಾರೆ ಎಂದಿದ್ದೆ ಅಷ್ಟೇ. ಆದರೆ ಕಾಂಗ್ರೆಸ್ ಕಾರ್ಯಕರ್ತರು ಅದನ್ನು ಅಪಾರ್ತ ಮಾಡಿಕೊಂಡು ಅರನ್ನು ಅವರೇ ದೂಷಿಸಿಕೊಳ್ಳುತ್ತಿದ್ದಾರೆ ಎಂದರು. 
 
ನಿನ್ನೆ ಜಗ್ಗೇಶ್ ಹೇಳಿದ್ದೇನು ?:
ಕಾಂಗ್ರೆಸ್‌ ನಾಯಕರು ಸನ್ನಿಲಿಯೋನ್‌‌ರಂತೆ, ಅವಳಿಗೂ ಅಭಿಮಾನಿಳಿದ್ದಂತೆ ಕಾಂಗ್ರೆಸ್ ನಾಯಕರಿಗೂ ಕೂಡ ಅಭಿಮಾನಿಗಳಿದ್ದಾರೆ. ಕಾಂಗ್ರೆಸ್ ನಾಯಕರ ಚಟುವಟಿಕೆಗಳನ್ನು ಜನ ಗಮನಿಸುತ್ತಿದ್ದು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷಗಳು ನೆಲಕಚ್ಚುತ್ತವೆ. ಪರಿಣಾಮ ಬಿಜೆಪಿ 175ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆದ್ದು ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದಿದ್ದರು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments