ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರನ್ನು ಮೂಲೆಗುಂಪು ಮಾಡಲು ಪಕ್ಷದಲ್ಲಿ ಪ್ರಯತ್ನಗಳು ನಡೆಯುತ್ತಿವೆ, ಪಕ್ಷದ ಆಂತರಿಕ ಬೆಳವಣಿಗೆಗಳಿಂದ ನೊಂದು ಯಡಿಯೂರಪ್ಪನವರು ಕಾಂಗ್ರೆಸ್ ಸೇರುತ್ತಿದ್ದಾರೆ.
ವಿಪಕ್ಷ ನಾಯಕ ಸಿದ್ದರಾಮಯ್ಯನವರನ್ನು ಭೇಟಿಯಾಗಿದ್ದಾರೆ ಎಂಬಿತ್ಯಾದಿ ವದಂತಿಗಳು ಇತ್ತೀಚೆಗೆ ಸುದ್ದಿಯಾಗಿದ್ದವು.
ಈ ಬಗ್ಗೆ ಸ್ವತಃ ಯಡಿಯೂರಪ್ಪನವರೇ ಇಂದು ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದ್ದಾರೆ.ಕ ಳೆದ ವರ್ಷ 2020ರ ಫೆಬ್ರವರಿ 27ರಂದು ನನ್ನ ಜನ್ಮದಿನದ ಕಾರ್ಯಕ್ರಮದಲ್ಲಿ ಅವರನ್ನು ಭೇಟಿ ಮಾಡಿದ್ದೇ ಕೊನೆ. ಆ ಬಳಿಕ ನಾನು ಅವರನ್ನು ವೈಯಕ್ತಿಕವಾಗಿ ಭೇಟಿ ಮಾಡಿಲ್ಲ. ಭೇಟಿ ಮಾಡುವ ಅಗತ್ಯ ಕೂಡ ಬಂದಿಲ್ಲ. ನನ್ನ ಸಿದ್ಧಾಂತ, ನಂಬಿಕೆಯಲ್ಲಿ ಯಾವತ್ತಿಗೂ ರಾಜಿ ಮಾಡಿಕೊಂಡು ಹೋಗುವುದಿಲ್ಲ. ನಾನು ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ್ದೇನೆ ಎಂದು ಮಾಧ್ಯಮಗಳಲ್ಲಿ ಪ್ರಸ್ತಾಪವಾಗಿರುವ ಸುದ್ದಿ ಸತ್ಯಕ್ಕೆ ದೂರ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿಯನ್ನು ಅಧಿಕಾರಕ್ಕೆ ತರುವುದು ನನ್ನ ಗುರಿ. ಗುರಿ ತಲುಪುವವರೆಗೆ ವಿರಮಿಸುವುದಿಲ್ಲ, ಪಕ್ಷದಲ್ಲಿಯೇ ಕಾರ್ಯನಿರ್ವಹಿಸುತ್ತೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.