ಸಿದ್ದರಾಮಯ್ಯನವರನ್ನು ನಾನು ವೈಯಕ್ತಿಕವಾಗಿ ಭೇಟಿ ಮಾಡಿಲ್ಲ: ಬಿ.ಎಸ್. ಯಡಿಯೂರಪ್ಪ

Webdunia
ಬುಧವಾರ, 13 ಅಕ್ಟೋಬರ್ 2021 (14:04 IST)
ಬೆಂಗಳೂರು  : ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರನ್ನು ಮೂಲೆಗುಂಪು ಮಾಡಲು ಪಕ್ಷದಲ್ಲಿ ಪ್ರಯತ್ನಗಳು ನಡೆಯುತ್ತಿವೆ, ಪಕ್ಷದ ಆಂತರಿಕ ಬೆಳವಣಿಗೆಗಳಿಂದ ನೊಂದು ಯಡಿಯೂರಪ್ಪನವರು ಕಾಂಗ್ರೆಸ್ ಸೇರುತ್ತಿದ್ದಾರೆ.

ವಿಪಕ್ಷ ನಾಯಕ ಸಿದ್ದರಾಮಯ್ಯನವರನ್ನು ಭೇಟಿಯಾಗಿದ್ದಾರೆ ಎಂಬಿತ್ಯಾದಿ ವದಂತಿಗಳು ಇತ್ತೀಚೆಗೆ ಸುದ್ದಿಯಾಗಿದ್ದವು.
ಈ ಬಗ್ಗೆ ಸ್ವತಃ ಯಡಿಯೂರಪ್ಪನವರೇ ಇಂದು ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದ್ದಾರೆ.ಕ ಳೆದ ವರ್ಷ 2020ರ ಫೆಬ್ರವರಿ 27ರಂದು ನನ್ನ ಜನ್ಮದಿನದ ಕಾರ್ಯಕ್ರಮದಲ್ಲಿ ಅವರನ್ನು ಭೇಟಿ ಮಾಡಿದ್ದೇ ಕೊನೆ. ಆ ಬಳಿಕ ನಾನು ಅವರನ್ನು ವೈಯಕ್ತಿಕವಾಗಿ ಭೇಟಿ ಮಾಡಿಲ್ಲ. ಭೇಟಿ ಮಾಡುವ ಅಗತ್ಯ ಕೂಡ ಬಂದಿಲ್ಲ. ನನ್ನ ಸಿದ್ಧಾಂತ, ನಂಬಿಕೆಯಲ್ಲಿ ಯಾವತ್ತಿಗೂ ರಾಜಿ ಮಾಡಿಕೊಂಡು ಹೋಗುವುದಿಲ್ಲ. ನಾನು ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ್ದೇನೆ ಎಂದು ಮಾಧ್ಯಮಗಳಲ್ಲಿ ಪ್ರಸ್ತಾಪವಾಗಿರುವ ಸುದ್ದಿ ಸತ್ಯಕ್ಕೆ ದೂರ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿಯನ್ನು ಅಧಿಕಾರಕ್ಕೆ ತರುವುದು ನನ್ನ ಗುರಿ. ಗುರಿ ತಲುಪುವವರೆಗೆ ವಿರಮಿಸುವುದಿಲ್ಲ, ಪಕ್ಷದಲ್ಲಿಯೇ ಕಾರ್ಯನಿರ್ವಹಿಸುತ್ತೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಕನ ಕನಸಿನಿಂದ ಮೊದಲು ಹೊರಬನ್ನಿ: ಪ್ರಿಯಾಂಕ್‌ ಖರ್ಗೆಗೆ ಸಿ.ಟಿ.ರವಿ ಟಾಂಗ್‌

ಯುವತಿ ಮೇಲೆ ಗ್ಯಾಂಗ್‌ರೇಪ್‌ ಬೆನ್ನಲ್ಲೇ ಮಹಿಳೆಯರ ಬಗ್ಗೆ ಸಿಎಂ ಮಮತಾ ಬ್ಯಾನರ್ಜಿ ವಿವಾದಾತ್ಮಕ ಹೇಳಿಕೆ

ಪಾಕಿಸ್ತಾನ ಮೇಲೆ ಮುಗಿಬಿದ್ದ ಅಫ್ಗನ್: ಗುಂಡಿನ ಕಾಳಗದಲ್ಲಿ 58 ಸೈನಿಕರ ಹತ್ಯೆ

ಸಾರ್ವಜನಿಕ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳಿಗೆ ನಿಷೇಧ ಹೇರಲು ಸಚಿವ ಪ್ರಿಯಾಂಕ್‌ ಖರ್ಗೆ ಒತ್ತಾಯ

ಆರ್‌ಎಸ್‌ಎಸ್‌ ಸಮವಸ್ತ್ರದಲ್ಲೇ ಧರಣಿ ಕುಳಿತ ಶಾಸಕ ಮುನಿರತ್ನ: ತಿರುಗೇಟು ನೀಡಿದ ಡಿಕೆಶಿ

ಮುಂದಿನ ಸುದ್ದಿ
Show comments