Select Your Language

Notifications

webdunia
webdunia
webdunia
webdunia

ನನಗೆ ಅಸಮಾಧಾನ ಇದೆ ಅಂತಾ ನಾನು ಹೇಳಿಲ್ಲ: ಸಚಿವ ಸೋಮಣ್ಣ

I have not said that I am upset
bangalore , ಸೋಮವಾರ, 13 ಮಾರ್ಚ್ 2023 (20:48 IST)
ವಸತಿ ಸಚಿವ ವಿ. ಸೋಮಣ್ಣ ಕಳೆದ ಕೆಲವು ದಿನಗಳಿಂದ ಪಕ್ಷದ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳದೆ ಇರುವ ಮೂಲಕ ರಾಜಕೀಯ ವಲಯದಲ್ಲಿ ಕುತೂಹಲ ಹೆಚ್ಚಿಸಿದ್ದಾರೆ. ಬಿಜೆಪಿಯಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತಿದೆ ಎಂಬ ಅಸಮಾಧಾನ ಹೊಂದಿರುವ ವಿ. ಸೋಮಣ್ಣ ಹೀಗಾಗಿಯೇ ಅಂತರ ಕಾಯ್ದುಕೊಳ್ಳುತ್ತಿದ್ದಾರೆ ಎಂದು ಹೇಳಲಾಗಿದೆ.ಇನ್ನು ಈ ಬಗ್ಗೆ ಇಂದು ವಿಧಾನಸೌಧದಲ್ಲಿ  ಮಾತನಾಡಿದ ಅವರು, ರಾಜಕಾರಣದಲ್ಲಿ ಇವೆಲ್ಲ ಇರುತ್ತೆ..ಏನು ಹೇಳಬೇಕು... ಎಲ್ಲಿ ಹೇಳಬೇಕು ಹೇಳಿದ್ದೀನಿ..ಕವಲುದಾರಿಗಳು ಇರುತ್ವೆ, ನಾನೇನೂ ಸನ್ಯಾಸಿ ಇಲ್ಲ…ಬಿಜೆಪಿಯಲ್ಲಿ ಟಿಕೆಟ್ ಕೊಟ್ಟರೆ ನಿಂತ್ಕೊತೀನಿ, ಇಲ್ಲ ಅಂದ್ರೆ ಇಲ್ಲನಾನು ಯಾವತ್ತಾದ್ರೂ ನನ್ನ ಮಗನಿಗೆ ಟಿಕೆಟ್ ಕೇಳಿದ್ದೀನಾ..!?ಡಿಕೆಶಿ, ಸಿದ್ದರಾಮಯ್ಯ ನಾವೆಲ್ಲ ಸ್ನೇಹಿತರು ನಾವು ಒಟ್ಟಿಗೆ ಕೆಲಸ ಮಾಡಿದ್ದೀವಿ ಅವರ ಕೆಲಸ ಅವರು ಮಾಡ್ತಾರೆ, ನನ್ನ ಕೆಲಸ ನಾನು ಮಾಡ್ತೀನಿ…ನನಗೆ ಅಸಮಾಧಾನ ಇದೆ ಅಂತಾ ನಾನು ಹೇಳಿಲ್ಲ ಎಂದು ಸ್ಪಸ್ಟನೆ ನೀಡಿದ್ರು.

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರು ನಗರದ ಒಳಗೆ ಮಧ್ಯಮ ಮತ್ತು ಲಘು ವಾಹನಗಳ ನಿಷೇಧಕ್ಕೆ ವಿರೋಧ