ದರ್ಶನ್ ಆ ವಿಚಾರಕ್ಕೂ ನನಗೂ ಸಂಬಂಧವಿಲ್ಲ: ಜಮೀರ್ ಅಹ್ಮದ್

Sampriya
ಭಾನುವಾರ, 1 ಸೆಪ್ಟಂಬರ್ 2024 (15:51 IST)
Photo Courtesy X
ಬೆಂಗಳೂರು: ನಟ ದರ್ಶನ್ ಅವರನ್ನು ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು ಸಚಿವ ಜಮೀರ್ ಅಹ್ಮದ್ ಕಾರಣ ಎಂಬ ಸುದ್ದಿ ಹರಿದಾಡಿತ್ತು. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ  ಜಮೀರ್ ಅವರು,  ಇದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಇದು ಪೊಲೀಸ್ ಇಲಾಖೆ ಕೈಗೊಂಡ ಕ್ರಮ ಎಂದರು.

ದರ್ಶನ್ ಅವರು ಜೈಲಿನಲ್ಲಿ ಟೀ ಕಪ್ ಹಿಡಿದು ಸಿಗರೇಟ್ ಸೇದುತ್ತಿದ್ದ ಫೋಟೋ ವೈರಲ್ ಆಗಿತ್ತು. ಮಾಧ್ಯಮಗಳಲ್ಲಿ ಈ ಸುದ್ದಿ ಪ್ರಸಾರವಾದ ಬೆನ್ನಲ್ಲೇ ಪೊಲೀಸ್ ಇಲಾಖೆ ಈ ಕ್ರಮ ಕೈಗೊಂಡಿದೆ. ನಾನು ಜಿಲ್ಲಾ ಉಸ್ತುವಾರಿ ಮಂತ್ರಿ ಆಗಿರುಬಹುದು, ಆದರೆ ನಾನು ಡಿಜಿ ಅಲ್ಲ ಎಂದರು.

ಚಿತ್ರದುರ್ಗಾದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಪರಪ್ಪನ ಅಗ್ರಹಾರದಲ್ಲಿ ವಿಐಪಿ ಟ್ರೀಟ್‌ಮೆಂಟ್ ಪಡೆಯುತ್ತಿರುವ ಹಿನ್ನೆಲೆ ಹತ್ಯೆ ಪ್ರಕರಣ ಎಲ್ಲ ಆರೋಪಿಗಳನ್ನು ಬೇರೆ ಬೇರೆ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಇದೀಗ ದರ್ಶನ್ ಅವರು ಬಳ್ಳಾರಿ ಜೈಲಿನಲ್ಲಿದ್ದಾರೆ.

ಇನ್ನೂ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಿದ ಹಿಂದೆ ಸಚಿವ ಜಮೀರ್ ಅಹ್ಮದ್ ಕೈವಾಡವಿದೆ ಎಂದು ಹೇಳಲಾಗಿತ್ತು. ಆದರೆ ಇದು ಪೊಲೀಸ್ ಇಲಾಖೆ ಕೈಗೊಂಡ ಕ್ರಮ ಎಂದು ಜಮೀರ್ ಹೇಳಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ ಎಸ್ಎಸ್ ಬಿಟ್ರೆ ಬೇರೆ ವಿಷ್ಯಗಳೇ ಇಲ್ವಾ: ಪ್ರಿಯಾಂಕ್ ಖರ್ಗೆ ನೆಟ್ಟಿಗರ ಪ್ರಶ್ನೆ

Karnataka Weather: ರಾಜ್ಯದಲ್ಲಿ ಈ ವಾರದ ಹವಾಮಾನದಲ್ಲಿ ಏನಿದೆ ಬದಲಾವಣೆ

ಹರಿಯಾಣ ರಾಜ್ಯದಲ್ಲಿ ಒಂದೇ ದಿನದಲ್ಲಿ 257 ಆರೋಪಿಗಳ ಬಂಧನ

100 ವರ್ಷಗಳ ಬಳಿಕ ಆರ್‌ಎಸ್‌ಎಸ್ ಕಾನೂನು ಪಾಲಿಸಿದೆ: ಪ್ರಿಯಾಂಕ್ ಖರ್ಗೆ

ಶಬರಿಮಲೆ ಚಿನ್ನ ನಾಪತ್ತೆ ಪ್ರಕರಣ, ಎಸ್‌ಐಟಿ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments