Select Your Language

Notifications

webdunia
webdunia
webdunia
webdunia

ನಾನು ಬೇಕಾದಷ್ಟು ತನಿಖೆಗಳನ್ನು ನೋಡಿದ್ದೇನೆ: ಡಿ.ಕೆ.ಶಿವಕುಮಾರ್

ನಾನು ಬೇಕಾದಷ್ಟು ತನಿಖೆಗಳನ್ನು ನೋಡಿದ್ದೇನೆ: ಡಿ.ಕೆ.ಶಿವಕುಮಾರ್
ಬೆಂಗಳೂರು , ಸೋಮವಾರ, 6 ನವೆಂಬರ್ 2017 (17:17 IST)
ಆದಾಯ ತೆರಿಗೆ ಇಲಾಖೆಗೆ ವಿಚಾರಣೆಗಾಗಿ ಆಗಮಿಸಿದ್ದ ಇಂಧನ ಸಚಿವ ಡಿ.ಕೆ.ಶಿವಕುಮಾರ್, ವಿಚಾರಣೆಯ ನಂತರ ನಾನು ಜೀವನದಲ್ಲಿ ಬೇಕಾದಷ್ಟು ತನಿಖೆಗಳನ್ನು ನೋಡಿದ್ದೇನೆ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಾನೊಂದು ತೆರೆದ ಪುಸ್ತಕದಂತೆ. ಕಾನೂನುಬದ್ಧವಾಗಿ ಕಾರ್ಯನಿರ್ವಹಿಸಿದ್ದೇನೆ. ನನ್ನ ರಾಜಕೀಯ ಜೀವನ ಪಾರದರ್ಶಕವಾಗಿದೆ ಎಂದು ತಿಳಿಸಿದ್ದಾರೆ.
 
ನ್ಯಾಯಬದ್ಧವಾಗಿ ನಾನು ಜವಾಬ್ದಾರಿ ನಿರ್ವಹಿಸಿದ್ದೇನೆ. ಒಂದು ವೇಳೆ, ಕಾನೂನುಬಾಹಿರವಾಗಿ ಕಾರ್ಯನಿರ್ವಹಿಸಿದ್ದೇನೆ ಎಂದಾದಲ್ಲಿ ಶಿಕ್ಷೆ ಅನುಭವಿಸಲು ಸಿದ್ದನಿದ್ದೇನೆ ಎಂದರು,
 
ಐಟಿ ವಿಚಾರಣೆ ಬಗ್ಗೆ ಈ ಸಂದರ್ಭದಲ್ಲಿ ನಾನು ಹೇಳಿಕೆ ನೀಡಲು ಇಷ್ಟಪಡುವುದಿಲ್ಲ. ಐಟಿ ವಿಚಾರಣೆ ಪೂರ್ಣಗೊಂಡ ನಂತರ ಹೇಳಿಕೆ ನೀಡುತ್ತೇನೆ. ನಾಳೆ ನನಗೊಬ್ಬನಿಗೆ ಹಾಜರಾಗುವಂತೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ. ಅದರಂತೆ, ನಾಳೆ ವಿಚಾರಣೆಗೆ ಹಾಜರಾಗುತ್ತೇನೆ ಎಂದು ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ಸಿದ್ದರಾಮಯ್ಯರದ್ದು ತುಘಲಕ್ ದರ್ಬಾರ್: ಬಿಎಸ್‌ವೈ