Select Your Language

Notifications

webdunia
webdunia
webdunia
webdunia

ಗಂಗಾವತಿ ಕ್ಷೇತ್ರವನ್ನು ಸೆಲೆಕ್ಟ್ ಮಾಡಿಕೊಂಡಿದ್ದೇನೆ : ಜನಾರ್ದನ ರೆಡ್ಡಿ

ಚುನಾವಣೆ
ಗದಗ : ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಮುಂದಿನ ರಾಜಕಿಯ ನಡೆಯ ಬಗ್ಗೆ ಸಾಕಷ್ಟು ಚರ್ಚೆ ನಡೆದಿರುವ ಬೆನ್ನಲ್ಲೇ ತಾವು ಗಂಗಾವತಿ ಮತ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ತಿಳಿಸಿದ್ದಾರೆ.

ತಮ್ಮ ತೀರ್ಮಾನವನ್ನು ಘೋಷಿಸುವುದಕ್ಕೂ ಮುನ್ನವೇ ರೆಡ್ಡಿ ಗಂಗಾವತಿಯಲ್ಲಿ ತಮ್ಮದೇ ರೀತಿಯಲ್ಲಿ ಅಸಲಿ ಆಟ ಪ್ರಾರಂಭಿಸಿದ್ದಾರೆ.

ಜನಾರ್ದನ ರೆಡ್ಡಿಯವರು ಇಂದು ನಗರದ ಐತಿಹಾಸಿಕ ಬಸವೇಶ್ವರ ಪುತ್ಥಳಿ ವೀಕ್ಷಣೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, ಗಂಗಾವತಿ ಮತ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ನಿಶ್ಚಯಿಸಿದ್ದೆನೆ ಎಂದು ತಿಳಿಸಿದ್ದಾರೆ. ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆ ಕಳೆದ 12 ವರ್ಷದಿಂದ ಬಳ್ಳಾರಿಯಲ್ಲಿದ್ದೇನೆ.

ಬಳ್ಳಾರಿಯಿಂದ ಗಂಗಾವತಿಗೆ 1 ಗಂಟೆ ಪ್ರಯಾಣ. ಗಂಗಾವತಿ ಕ್ಷೇತ್ರವನ್ನು ಮುಂದಿನ ಚುನಾವಣೆಗೆ ಆಯ್ಕೆ ಮಾಡಿಕೊಂಡಿದ್ದೇನೆ ಎಂದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಹಾನಗರ ಪಾಲಿಕೆ ಮತ ಎಣಿಕೆ ಆರಂಭ