Select Your Language

Notifications

webdunia
webdunia
webdunia
webdunia

ಮತ್ತೆ ಸಕ್ರಿಯ ರಾಜಕಾರಣಕ್ಕೆ: ಮಾಜಿ ಸಚಿವ ಪಿಜಿಆರ್ ಸಿಂಧ್ಯಾ ಸುಳಿವು

ಮತ್ತೆ ಸಕ್ರಿಯ ರಾಜಕಾರಣಕ್ಕೆ: ಮಾಜಿ ಸಚಿವ ಪಿಜಿಆರ್ ಸಿಂಧ್ಯಾ ಸುಳಿವು
ಬೆಂಗಳೂರು , ಶನಿವಾರ, 24 ಡಿಸೆಂಬರ್ 2016 (17:40 IST)
ಮತ್ತೆ ಸಕ್ರಿಯ ರಾಜಕಾರಣಕ್ಕೆ ಮರಳಲು ನಿರ್ಧರಿಸಿದ್ದೇನೆ ಎಂದು ಮಾಜಿ ಸಚಿವ ಪಿಜಿಆರ್ ಸಿಂಧ್ಯಾ ಸುಳಿವು ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜೆಡಿಎಸ್ ಹಾಗೂ ಬಿಜೆಪಿ ಪಕ್ಷದಲ್ಲಿ ನನ್ನ ಸ್ನೇಹಿತರಿದ್ದಾರೆ. ರಾಜ್ಯದಲ್ಲಿ ಮುಂದಿನ ಬಾರಿ ಉತ್ತಮ ಸರಕಾರ ತರುವ ಹಿನ್ನೆಲೆಯಲ್ಲಿ ಮತ್ತೆ ರಾಜಕಾರಣಕ್ಕೆ ಮರಳಬೇಕೆಂದು ನಿರ್ಧರಿಸಿದ್ದೇನೆ. ಆದರೆ, ಯಾವು ಪಕ್ಷ ಸೇರಬೇಕು ಎಂದು ನಿರ್ಧರಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
 
ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ನನ್ನ ತಂದೆ ಸಮಾನರು. ಮುಖ್ಯಮಂತ್ರಿ ಸಿದ್ದರಾಮಯ್ಯ ನನ್ನ ಸಹೋದರಂತೆ. ಆದರೆ, ಯಾವ ಪಕ್ಷ ಸೇರಬೇಕೆಂದು ಗೊಂದಲದಲ್ಲಿದ್ದೇನೆ. ಸದ್ಯದಲ್ಲಿಯೇ ಯಾವ ಪಕ್ಷ ಸೇರಬೇಕೆಂದು ನಿರ್ಧರಿಸುತ್ತೇನೆ ಎಂದು ಹೇಳಿದರು.  
 
ಈ ಹಿಂದೆ ಜೆಡಿಎಸ್ ಆಡಳಿತದಲ್ಲಿ ಸಾರಿಗೆ ಸಚಿವರಾಗಿದ್ದ ಪಿಜಿಆರ್ ಸಿಂಧ್ಯಾ ಅವರು ಕಳೆದ ಕೆಲವು ವರ್ಷಗಳಿಂದ ರಾಜಕೀಯದಿಂದ ದೂರವಿದ್ದರು. ಆದರೆ, ಇದೀಗ ಮತ್ತೆ ಸಕ್ರಿಯ ರಾಜಕೀಯದತ್ತ ಬರುವ ಸುಳಿವು ನೀಡಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಪೊಲೀಸ್ ದಾಳಿಗೆ ಹೆದರಿ ತನ್ನನ್ನು ತಾನೇ ಸ್ಫೋಟಿಸಿಕೊಂಡ ಮಹಿಳಾ ಉಗ್ರಗಾಮಿ