Select Your Language

Notifications

webdunia
webdunia
webdunia
webdunia

ಬಿಜೆಪಿ ಸೇರ್ಪಡೆಯಾಗುವುದಾಗಿ ಹೇಳಿಲ್ಲ: ಯೂ-ಟರ್ನ್ ಹೊಡೆದ ಶ್ರೀನಿವಾಸ್ ಪ್ರಸಾದ್

ಬಿಜೆಪಿ
ಮೈಸೂರು: , ಬುಧವಾರ, 2 ನವೆಂಬರ್ 2016 (13:23 IST)
ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುತ್ತೇನೆ ಎಂದು ನಾನು ಎಲ್ಲೂ ಹೇಳಿಲ್ಲ ಎಂದು ಮಾಜಿ ಸಚಿವ ಹಿರಿಯ ಮುಖಂಡ ಶ್ರೀನಿವಾಸ್ ಪ್ರಸಾದ್ ಯೂ-ಟರ್ನ್ ಹೊಡೆದಿದ್ದಾರೆ.
 
ನಂಜನಗೂಡು ಉಪಚುನಾವಣೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿದಲ್ಲಿ ಮಾತ್ರ ಜೆಡಿಎಸ್ ಬೆಂಬಲ ನೀಡಲಿದೆ ಎನ್ನುವ ದೇವೇಗೌಡರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಶ್ರೀನಿವಾಸ್ ಪ್ರಸಾದ್, ದೇವೇಗೌಡರು ಹಿರಿಯ, ಸಜ್ಜನ ರಾಜಕಾರಣಿಯಾಗಿದ್ಜಾರೆ ಎಂದರು. 
 
ನಂಜನಗೂಡು ಕ್ಷೇತ್ರದ ಹಿರಿಯರು, ಬೆಂಬಲಿಗರನ್ನು ಭೇಟಿ ಮಾಡಿ ಚರ್ಚಿಸಿದ ನಂತರ ಯಾವ ಪಕ್ಷಕ್ಕೆ ಸೇರ್ಪಡೆಯಾಗಬೇಕು ಎನ್ನುವ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.
 
ಬಿಜೆಪಿಯ ಒಬಿಸಿ ಸಮಾವೇಶಕ್ಕೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಆಗಮಿಸುತ್ತಿರುವುದರಿಂದ ಅವರ ಸಮ್ಮುಖದಲ್ಲಿಯೇ ಶ್ರೀನಿವಾಸ್ ಪ್ರಸಾದ್ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಬಿಜೆಪಿ ಮುಖಂಡರು ಹೇಳಿಕೆ ನೀಡಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

Share this Story:

Follow Webdunia kannada

ಮುಂದಿನ ಸುದ್ದಿ

ಒನಕೆ ಹಿಡಿದು ಪ್ರತಿಭಟನೆ ನಡೆಸುವುದು ಸರಿಯಲ್ಲ: ಸಚಿವ ಅಂಜನೇಯ