ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತರ ಕರ್ನಾಟಕದ ಜನರು ನನ್ನ ಬಗ್ಗೆ ಅಪಾರ ವಿಶ್ವಾಸವಿಟ್ಟಿದ್ದಾರೆ. ನಾನೂ ಅವರ ಬಗ್ಗೆ ಅಭಿಮಾನ ಹೊಂದಿದ್ದೇನೆ. ಉತ್ತರ ಕರ್ನಾಟಕ ಜನರ ಋಣ ತೀರಿಸುವ ಜಬಾಬ್ದಾರಿ ನನ್ನ ಹೆಗಲ ಮೇಲಿದೆ ಎಂದು ಬಸವನ ಬಾಗೇವಾಡಿಯಲ್ಲಿ ಹೇಳಿದರು.
ನಮ್ಮ ಸರ್ಕಾರ ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿದೆ. ಎಲ್ಲ ವರ್ಗಗಳಿಗೂ ನ್ಯಾಯ ಒದಗಿಸಬೇಕೆಂಬ ಸಿದ್ಧಾಂತ ನಮ್ಮದು. ಪ್ರಧಾನಿಗಳೇ ಕಪ್ಪು ಹಣ ಇದ್ದವರನ್ನ ಹೊರಗೆಳೆಯಿರಿ. ಅವರ ನಿದ್ದೆಗೆಡಿಸಿ. ಆದರೆ ಬಡವರ ನಿದ್ದೆಗೆಡಿಸಬೇಡಿ. ಬ್ಯಾಂಕ್ ಗಳ ಮುಂದೆ ಶ್ರೀಮಂತರು ಕ್ಯೂ ನಿಂತಿಲ್ಲ. ಸಾಲುಗಟ್ಟಿ ನಿಂತವರೆಲ್ಲ ಬಡವರು ಮತ್ತು ಮಧ್ಯಮ ವರ್ಗದವರು ಹಾಗೂ ಸಣ್ಣಪುಟ್ಟ ವ್ಯಾಪಾರಿಗಳು ಎಂದು ಮುಖ್ಯಮಂತ್ರಿಗಳು ನುಡಿದರು.
ನೋಟು ಅಮಾನ್ಯದ ಬಳಿಕ ರೈತರಿಗೆ ಆಗಿರುವ ತೊಂದರೆ ಬಗ್ಗೆ ಕೇಂದ್ರಕ್ಕೆ ಮೂರು ಬಾರಿ ಪತ್ರ ಬರೆದರೂ ಪ್ರತಿಕ್ರಿಯೆ ಬಂದಿಲ್ಲ. ರೈತರ ಹಿತದೃಷ್ಟಿಯಿಂದ ಮತ್ತೆ ಪತ್ರ ಬರೆಯುವೆ ಎಂದು ತಿಳಿಸಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.