ಬೆಂಗಳೂರು: ವಾಚ್ ವಿಚಾರವಾಗಿ ಪ್ರಶ್ನೆ ಎತ್ತಿದ್ದ ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಟಾಂಗ್ ನೀಡಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ನಾರಾಯಣಸ್ವಾಮಿ ಅವರ ಮನೆಯಿಂದಲೇ ವಾಚ್ (Watch) ಕದ್ದಿದ್ದೇನೆ ಎಂದು ಲೇವಡಿ ಮಾಡಿದ್ದಾರೆ.
ನನ್ನ ಬಳಿ ಇರುವ ದುಬಾರಿ ವಾಚ್‌ಗಳ ಬಗ್ಗೆ ನಾನು ಎಲ್ಲವನ್ನೂ ಪಾರದರ್ಶಕವಾಗಿ ಹೇಳಿದ್ದೇನೆ. ಆ ವಾಚ್ ಖರೀದಿ ಬಗ್ಗೆ ನನಗೆ ಗೊತ್ತು, ಬಿಜೆಪಿಯವರಿಗೇನು ಗೊತ್ತು ಎಂದು ಪ್ರಶ್ನಿಸಿದರು.
ಹಣ ಕೊಟ್ಟಿರುವುದು ನಾನು, ಕ್ರೆಡಿಕ್ ಕಾರ್ಡ್ ಬಳಸಿರುವುದು ನಾನು. ನಾನು ಎಲ್ಲವನ್ನೂ ಪಾರದರ್ಶಕವಾಗಿ ಹೇಳಿದ್ದೇನೆ. ನನ್ನ ಬಳಿ ರೋಲೆಕ್ಸ್ ವಾಚ್ ಇರುವುದನ್ನೂ ಹೇಳಿದ್ದೇನೆ. ನಾರಾಯಣಸ್ವಾಮಿಯಿಂದ ಕಲಿಯುವುದೇನಿಲ್ಲ ಎಂದು ಹೇಳಿದರು