Publish Date: Mon, 27 Dec 2021 (15:09 IST)
Updated Date: Mon, 27 Dec 2021 (16:11 IST)
ಎರಡು ದಿನಗಳ ಹಿಂದೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ 'ಭಾರತದಲ್ಲಿ ಹಿಂದೂ ಪುನರುತ್ಥಾನ' ಎಂಬ ವಿಷಯದ ಕುರಿತು ಮಾತನಾಡಿದ್ದ ನನ್ನ ಹೇಳಿಕೆಯನ್ನು ವಾಪಸ್ ಪಡೆಯುತ್ತೇನೆ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.ಉಡುಪಿ ಶ್ರೀಕೃಷ್ಣಮಠದ ಧಾರ್ಮಿಕ ಕಾರ್ಯಕ್ರಮದಲ್ಲಿ ತೇಜಸ್ವಿ ಸೂರ್ಯ ಮಾತನಾಡಿದ್ದರು. ಅವರ ಕೆಲವು ಮಾತುಗಳು ಸಾಮಾಜಿಕ ಜಾಲತಾಣದಲ್ಲಿ ತೀವ್ರ ಟೀಕೆಗೆ ಒಳಗಾಗಿದ್ದವು. ಈ ಹಿನ್ನೆಲೆಯಲ್ಲಿ ಅವರು ತಮ್ಮ ಹೇಳಿಕೆಯನ್ನು ವಾಪಸ್ ಪಡೆದಿದ್ದಾರೆ.