Publish Date: Thu, 27 Apr 2023 (10:56 IST)
Updated Date: Thu, 27 Apr 2023 (10:57 IST)
ಹುಬ್ಬಳ್ಳಿ : ಯಡಿಯೂರಪ್ಪ ನನ್ನ ಟಿಕೆಟ್ ಸಲುವಾಗಿ ಸಾಕಷ್ಟು ಪ್ರಯತ್ನ ಮಾಡಿದ್ದಾರೆ. ಆದರೆ ಅವರು ಅಸಹಾಯಕರಾದರು. ಈಗ ನನ್ನ ಮೇಲೆ ಯಡಿಯೂರಪ್ಪ ಮಾಡಿರುವ ಟೀಕೆಗಳನ್ನು ಆಶೀರ್ವಾದ ಎಂದು ಭಾವಿಸುತ್ತೇನೆ.
ಯಡಿಯೂರಪ್ಪ ಎಂಬ ಹಿರಿಯ ಮತ್ತು ಲಿಂಗಾಯತ ನಾಯಕರಿಂದ ನನ್ನ ಬೈಯಿಸಲಾಗುತ್ತಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಆರೋಪ ಮಾಡಿದ್ದಾರೆ.
ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಮೇಲೆ ಬಂದೂಕು ಇಟ್ಟು ಗುಂಡು ಹಾರಿಸಲಾಗುತ್ತಿದೆ. ಇದೇ ಯಡಿಯೂರಪ್ಪನವರು ಕೆಜೆಪಿ ಕಟ್ಟಿದಾಗ ಬಸವರಾಜ ಬೊಮ್ಮಾಯಿ ಹೋಗಲಿಲ್ಲ ಅಂತ ಹಿಗ್ಗಾಮುಗ್ಗಾ ಬೈದಿದ್ದರು.
ಬಸವರಾಜ ಬೊಮ್ಮಾಯಿಯವರು ಬಿಜೆಪಿಯಲ್ಲಿ ಗೆಲುವು ಸಾಧಿಸಿದ್ದರು. ನಾನು ಕೂಡಾ ಅತಿ ಹೆಚ್ಚು ಲೀಡ್ನಿಂದ ಗೆಲುವು ಸಾಧಿಸುತ್ತೇನೆ. ಯಡಿಯೂರಪ್ಪ ಎಷ್ಟೇ ಬೈದರು ಅದು ಅವರ ಆಶೀರ್ವವಚನ ಎಂದು ಭಾವಿಸುತ್ತೆನೆ ಎಂದು ಹೇಳಿದರು.