Webdunia - Bharat's app for daily news and videos

Install App

ಸಚಿವ ಹುದ್ದೆ, ಕೆಪಿಸಿಸಿ ಅಧ್ಯಕ್ಷ ಸ್ಥಾನ ಎರಡು ಬೇಕೆಂದು ಪಟ್ಟು ಹಿಡಿದ ಡಿ.ಕೆ.ಶಿವಕುಮಾರ್

Webdunia
ಗುರುವಾರ, 21 ಜುಲೈ 2016 (18:34 IST)
ಸಚಿವ ಸ್ಥಾನ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ಎರಡು ಬೇಕು ಎಂದು ಡಿ.ಕೆ.ಶಿವಕುಮಾರ್ ಪಟ್ಟು ಹಿಡಿದಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷರ ನೇಮಕಾತಿಯನ್ನು ಆರು ತಿಂಗಳುಗಳ ಕಾಲ ಮುಂದೂಡಲಾಗಿದೆ ಎಂದು ಎಐಸಿಸಿ ಮೂಲಗಳು ತಿಳಿಸಿವೆ.
 
ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಅವರು ಸಚಿವ ಸ್ಥಾನ ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನ ಎರಡು ಬೇಕು ಎಂದು ಪಟ್ಟು ಹಿಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಅಧ್ಯಕ್ಷರ ನೇಮಕಾತಿಯನ್ನು ಆರು ತಿಂಗಳು ಮುಂದೂಡಿದೆ. 
 
ಸದ್ಯ ಇಂಧನ ಇಲಾಖೆ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಡಿ.ಕೆ.ಶಿವಕುಮಾರ್ ಅವರು ಸಚಿವ ಸ್ಥಾನದೊಂದಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು ಎಂದು ಪಟ್ಟು ಹಿಡಿದಿದ್ದಾರೆ.
 
ಸಚಿವ ಸ್ಥಾನ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ಎರಡನ್ನು ನೀಡಲು ಸಾಧ್ಯವಿಲ್ಲ. ಯಾವುದಾದರು ಒಂದು ಸ್ಥಾನ ಮಾತ್ರ ಬೇಕಾದರೆ ಕೇಳಿ. ಸದ್ಯದಲ್ಲೇ ಕೆಪಿಸಿಸಿ ಅಧ್ಯಕ್ಷ ಸ್ಥಾನದ ನೇಮಕಾತಿ ಮಾಡುತ್ತೇವೆ. ಇಲ್ಲವಾದಲ್ಲಿ 6 ತಿಂಗಳ ನಂತರ ಅಧ್ಯಕ್ಷರ ಆಯ್ಕೆ ಮಾಡುತ್ತೇವೆ. ಅಲ್ಲಿಯವರೆಗೂ ಡಾ.ಜಿ.ಪರಮೇಶ್ವರ್ ಅವರೇ ಅಧ್ಯಕ್ಷರಾಗಿ ಮುಂದುವರೆಯಲಿ ಎಂದು ಹೈಕಮಾಂಡ್ ಸೂಚನೆ ನೀಡಿದೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತ: ಪ್ರಾಣ ಉಳಿಸಿಕೊಳ್ಳಲು ಬಿಲ್ಡಿಂಗ್‌ನಿಂದ ವಿದ್ಯಾರ್ಥಿಗಳು ಹಾರುತ್ತಿರುವ ಭೀಕರ ವಿಡಿಯೋ ವೈರಲ್‌

ಶೀಘ್ರದಲ್ಲೇ ನಿವೃತ್ತಿ ಪಡೆಯುವುದಾಗಿ ಹೇಳಿದ್ದ: ಕ್ಯಾಪ್ಟನ್ ಸುಮೀತ್‌ ಸಬರ್ವಾಲ್‌ಗೆ ತಂದೆಯ ಕಣ್ಣೀರ ಅಂತಿಮ ವಿದಾಯ

ರಾತೋರಾತ್ರಿ ಹಿಂದೂ ಕಾರ್ಯಕರ್ತರ ಮನೆಗೆ ಪೊಲೀಸರ ಭೇಟಿ: ತನಿಖೆಗೆ ಆದೇಶ

ಬಾಂಬ್‌ ಬೆದರಿಕೆ: ನಾಗ್ಪುರ ಏರ್‌ಪೋರ್ಟ್‌ನಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ

ಲಂಡನ್ ಬೆನ್ನಲ್ಲೇ ಪ್ಯಾರಿಸ್‌ಗೆ ನಿಗದಿಯಾಗಿದ್ದ ಏರ್‌ ಇಂಡಿಯಾ ವಿಮಾನ ರದ್ದು

ಮುಂದಿನ ಸುದ್ದಿ
Show comments