ಬೆಂಗಳೂರು: ನಾನು ಪಕ್ಷದ ಶಿಸ್ತಿನ ಸಿಪಾಯಿ. ನಾನು ಹಗಲು ರಾತ್ರಿ ದುಡಿದು ಪಕ್ಷ ಕಟ್ಟಿದ್ದೇನೆ. ಮುಂದೆಯೂ ಕಟ್ಟುತ್ತೇನೆಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆ ಸಂಬಂಧ ಭಾರೀ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಡಿಕೆ ಶಿವಕುಮಾರ್ ಈ ರೀತಿ ಬರೆದುಕೊಂಡಿದ್ದಾರೆ. ಈ ಬಗ್ಗೆ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.
ಕಾಂಗ್ರೆಸ್ ಪಕ್ಷ ಎಲ್ಲಿಯವರೆಗೂ ನನ್ನನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಕೆಲಸ ಮಾಡಲು ಹೇಳುತ್ತಾರೋ ಅಲ್ಲಿಯವರೆಗೆ ನಾನು ಪಕ್ಷದ ಶಸ್ತಿನ ಸಿಪಾಯಿಯಂತೆ ಕೆಲಸ ಮಾಡಿಕೊಂಡು ಹೋಗುತ್ತೇನೆ. ಮುಂದೆಯೂ ಪಕ್ಷ ಅಧಿಕಾರಕ್ಕೆ ಬರುವಂತೆ ದುಡಿಯುವವನು ನಾನು ಎಂದು ಬರೆದುಕೊಂಡಿದ್ದಾರೆ.