Publish Date: Sat, 29 Jun 2019 (11:52 IST)
Updated Date: Sat, 29 Jun 2019 (11:54 IST)
ಬಾಗಲಕೋಟೆ : ಬಿಜೆಪಿಯನ್ನು ಈಸ್ಟ್ ಇಂಡಿಯಾ ಕಂಪೆನಿಗೆ ಹೋಲಿಸಿದ ಸಿದ್ದರಾಮಯ್ಯ ಅವರಿಗೆ ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ತಿರುಗೇಟು ನೀಡಿದ್ದಾರೆ.
ರಾಜ್ಯದಲ್ಲಿ ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿ ಬರೋದಕ್ಕೆ ಯಾರು ಕಾರಣ. ಅವರ ಜೊತೆ ಯಾರು ಸಂಪರ್ಕ ಹೊಂದಿದ್ದರು. ಸ್ವಾತಂತ್ರ್ಯ ಪೂರ್ವ ಹಾಗೂ ನಂತರ ಯಾರು ಅವರ ಜೊತೆ ಸಂಬಂಧ ಇಟ್ಟುಕೊಂಡಿದ್ದಾರೆ. ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿ ಜೊತೆ ಸಂಬಂಧ ಇಟ್ಟುಕೊಂಡಿದ್ದೋರು ಒಂದಿಬ್ಬರು ಇದ್ದಾರೆ ಎಂದು ಕೆ.ಎಸ್.ಈಶ್ವರಪ್ಪ ಕಿಡಿಕಾರಿದ್ದಾರೆ.
ಅಲ್ಲದೇ ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕೆಂದು ಅವರ ಸೆರಗು ಹಿಡಿದುಕೊಂಡು ಓಡಾಡುತ್ತಿದ್ದಾರೆ. ಸಿದ್ದರಾಮಯ್ಯನವರೇ ಮೋದಿಯನ್ನು ಎಷ್ಟು ಟೀಕೆ ಮಾಡುತ್ತಿರೋ ಮಾಡಿ. ಜನ ನಿಮ್ಮನ್ನು ಎಲ್ಲಿ ಇಡಬೇಕೋ ಅಲ್ಲಿಟ್ಟಿದ್ದಾರೆ ಎಂದು ವ್ಯಂಗ್ಯ ಮಾಡಿದ್ದಾರೆ.
ಸಿಎಂ ಗ್ರಾಮವಾಸ್ತವ್ಯ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಕುಮಾರಸ್ವಾಮಿ ಶಾಲೆಗಳಲ್ಲಿ ವಾಸ್ತವ್ಯ ಮಾಡಿದ್ದನ್ನು ನಾನು ಸ್ವಾಗತಿಸಿದ್ದೇನೆ. ಇಡೀ ರಾಜ್ಯದಲ್ಲಿನ ಶಾಲೆ ಕಟ್ಟಡಗಳನ್ನು ಸರಿಪಡಿಸಲಿ ಅಭಿವೃದ್ಧಿ ಪಡಿಸಲಿ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.