Select Your Language

Notifications

webdunia
webdunia
webdunia
webdunia

ಕ್ಷೇತ್ರದ ಜನರೊಂದಿಗೆ ಸದಾ ಇರುತ್ತೇನೆ: ಸಚಿವ ಕೆ.ಗೋಪಾಲಯ್ಯ

I will always be with the people of the area
bangalore , ಶನಿವಾರ, 29 ಏಪ್ರಿಲ್ 2023 (14:20 IST)
ಕ್ಷೇತ್ರದ ಅಭಿವೃದ್ಧಿ ಹಾಗೂ ಜನರ ಜೊತೆ ಸದಾ ಇರುತ್ತೇನೆ. ಕಳೆದ ಚುನಾವಣೆಯಲ್ಲಿ ಬೆಂಬಲಿಸಿ ಹೆಚ್ಚಿನ ಮತದೊಂದಿಗೆ ಗೆಲ್ಲಿಸಿದ್ದೀರಿ. ಅದೇ ರೀತಿ ಈ ಬಾರಿಯೂ ಹೆಚ್ಚಿನ ಮತದೊಂದಿಗೆ ಮತ ನೀಡಿ ಎಂದು ಸ್ಥಳೀಯ ಶಾಸಕರು ಹಾಗೂ ಅಬಕಾರಿ ಸಚಿವರಾದ ಕೆ.ಗೋಪಾಲಯ್ಯರವರು ತಿಳಿಸಿದರು.
 
ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಕಾಮಾಕ್ಷಿಪಾಳ್ಯದ, ಸವಿತಾ ಸಮಾಜದವರೊಡನೆ ಸಮಾಲೋಚನೆ ನಡೆಸಿ ಅವರು ಮಾತನಾಡಿದರು.
 
ಕ್ಷೇತ್ರದ ಜನರ ಸಮಸ್ಯೆಗಳಿಗೆ ಯಾವಾಗಲೂ ನಾನು ಸ್ಪಂದಿಸುತ್ತೇನೆ. ಅತ್ಯುತ್ತಮ ಶಿಕ್ಷಣವನ್ನು ನೀಡುವ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸಿ ಅವರಿಗೆ ಉಚಿತವಾದ ಶಿಕ್ಷಣವನ್ನು ಕೊಡುವಂತಹ ಕೆಲಸವನ್ನು ಮಾಡುತ್ತೇವೆ ಎಂದರು.
 
ಕ್ಷೇತ್ರದ ಜನರಿಗೆ ಅನುಕೂಲವಾಗಬೇಕು. ಅವರ ಆರೋಗ್ಯ ಉತ್ತಮ ರೀತಿಯಲ್ಲಿ ಇರಬೇಕು ಎಂಬ ಮೂಲ ಉದ್ದೇಶದಿಂದ ಮಹಾಲಕ್ಷ್ಮಿ ಲೇಔಟ್ ನಲ್ಲಿ ನಮ್ಮ ಕ್ಲಿನಿಕ್ ಅನ್ನು ಪ್ರಾರಂಭಿಸಿ ಕಾರ್ಯರೂಪಕ್ಕೆ ತರಲಾಗಿದೆ ಇದರ ಸದುಪಯೋಗವನ್ನು ಎಲ್ಲರೂ ಪಡೆದುಕೊಂಡು ಆರೋಗ್ಯವಂತ ಜೀವನ ನಡೆಸಲು ಮುಂದಾಗಿ ಎಂದರು. 
 
ಕ್ಷೇತ್ರದ ಜನತೆಯ ಕುಂದು ಕೊರತೆಗಳನ್ನು ಬಗೆಹರಿಸುತ್ತೇನೆ. ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳು ಮಾಡುತ್ತಾ ಅವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತೇನೆ ಎಂದು ಅವರು ತಿಳಿಸಿದರು.
 
ಇದೇ ಸಂದರ್ಭದಲ್ಲಿ ಮಾಜಿ ಉಪಮೇಯರ್  ಎಸ್.ಹರೀಶ್, ಮಾಜಿ ಬಿಬಿಎಂಪಿ ಸದಸ್ಯ ರಾಜೇಂದ್ರ ಕುಮಾರ್, ಶಿವಾನಂದಮೂರ್ತಿ, ಸಿಮೆಂಟ್ ಶ್ರೀನಿವಾಸ್, ಧನರಾಜ್, ಜಯರಾಮ್, ಪುಟ್ಟಸ್ವಾಮಿ ಸೇರಿದಂತೆ ಸ್ಥಳೀಯ ಬಿಜೆಪಿ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಈ ಬಾರಿಯ ನಿರ್ಧಾರ, ಬಹುಮತದ ಬಿಜೆಪಿ ಸರ್ಕಾರ : ನರೇಂದ್ರ ಮೋದಿ